No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಕೇರಳ, ಮಹಾರಾಷ್ಟ್ರ ಪ್ರಯಾಣಿಕರ ಮೇಲೆ ನಿಗಾವಹಿಸಲು ವಿಶೇಷ ತಂಡ ರಚನೆ; ಜಿಲ್ಲಾಧಿಕಾರಿ ನಿತೇಶ ಪಾಟೀಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 25, 2021
in ಹುಬ್ಬಳ್ಳಿ-ಧಾರವಾಡ
0
ಕೇರಳ, ಮಹಾರಾಷ್ಟ್ರ ಪ್ರಯಾಣಿಕರ ಮೇಲೆ ನಿಗಾವಹಿಸಲು ವಿಶೇಷ ತಂಡ ರಚನೆ; ಜಿಲ್ಲಾಧಿಕಾರಿ ನಿತೇಶ ಪಾಟೀಲ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಧಾರವಾಡ: ಕೋವಿಡ್-19ರ 2ನೇ ಅಲೆ ರಾಷ್ಟ್ರದಲ್ಲಿ ಆರಂಭವಾಗಿದ್ದು, ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕೇರಳದಿಂದ ರಸ್ತೆ, ರೈಲು ಮತ್ತು ವಿಮಾನದ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಕೊರೊನಾ (ಆರ್‍ಟಿಪಿಸಿಆರ್) ನೆಗೆಟಿವ್ ವರದಿಯನ್ನು ಹೊಂದಿರಬೇಕೆಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿದ್ದು, ಇದನ್ನು ಪ್ರಯಾಣಿಕ ಮತ್ತು ಪ್ರಯಾಣಿಕರನ್ನು ಹೊತ್ತು ತರುವ ಸಂಚಾರಿ ವಾಹನಗಳ ನಿರ್ವಾಹಕರು ಮತ್ತು ಮಾಲೀಕರು ಪಾಲಿಸುವ ಅಗತ್ಯವಿದೆಯೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊರೊನಾ ನಿಯಂತ್ರಣ, ಮಾಸ್ಕ್ ಧರಿಸದವರಿಂದ ದಂಡ ಸಂಗ್ರಹ, ಮದುವೆ ಮತ್ತು ಸಭೆ-ಸಮಾರಂಭಗಳಿಗೆ ಮಾರ್ಷಲ್‌ಗಳ ನೇಮಕಾತಿ ಕುರಿತು ಜರುಗಿದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.


ಪ್ರತಿನಿತ್ಯ ಮಹಾರಾಷ್ಟ್ರ ರಾಜ್ಯದಿಂದ ಬಸ್, ರೈಲು, ಲಾರಿ ಮೂಲಕ ಹಾಗೂ ಕೇರಳ ರಾಜ್ಯದಿಂದ ವಿಮಾನದ ಮೂಲಕ ಜಿಲ್ಲೆಗೆ ಪ್ರಯಾಣಿಕರು ಆಗಮಿಸುತ್ತಾರೆ. ಈ ಕುರಿತು ನಿಯಮ ಪಾಲನೆಗಳ ಪರಿಶೀಲನೆಗೆ ಮತ್ತು ನಿಯಮ ಉಲ್ಲಂಘಿಸುವವರ ವಿರುದ್ಧ ಸ್ಥಳದಲ್ಲಿಯೇ ಕ್ರಮ ಜರುಗಿಸಲು ಎಸಿಪಿ, ಡಿವೈಎಸ್‌ಪಿ, ಪಾಲಿಕೆಯ ವಲಯ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಧಾರವಾಡ ಮತ್ತು ಹುಬ್ಬಳ್ಳಿಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ತಂಡದ ಸದಸ್ಯರು ಮಹಾರಾಷ್ಟ್ರದಿಂದ ಬರುವ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿರ್ವಾಹಕರು ಕೊರೊನಾ (ಆರ್‍ಟಿಪಿಸಿಆರ್) ನೆಗೆಟಿವ್ ವರದಿಯನ್ನು ಹೊಂದಿರದ ಪ್ರಯಾಣಿಕರನ್ನು ಕರೆದುಕೊಂಡು ಬಂದಿದ್ದರೆ ಅಂತಹವರ ಮೇಲೆ ಪರಿಶೀಲಿಸಿ ಕಾನೂನು ಕ್ರಮ ಜರುಗಿಸಬೇಕು. ಮತ್ತು ಅಂತಹ ಬಸ್‌ಗಳನ್ನು ಮುಟ್ಟುಗೋಲು ಹಾಕಿ ಕ್ರಿಮಿನಲ್ ಪ್ರಕರಣ ದಾಖಲಿಸಿ, ಎಚ್ಚರಿಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.


ಈಗಾಗಲೇ ಬಸ್‌ನಿಲ್ದಾಣಗಳಲ್ಲಿ ಆರೋಗ್ಯ ಇಲಾಖೆಯಿಂದ ಪ್ರತಿ ದಿನ ಗಂಟಲು ದ್ರವ ಸಂಗ್ರಹಕ್ಕೆ ವಾಹನಗಳನ್ನು ನಿಲ್ಲಿಸಲಾಗಿದೆ. ಮತ್ತು ಶೀಘ್ರದಲ್ಲಿ ಲಾರಿಗಳು, ಖಾಸಗಿ ಬಸ್‌ಗಳು ನಿಲ್ಲುವ ಸ್ಥಳಗಳಲ್ಲಿ ಮತ್ತು ರೈಲು ನಿಲ್ದಾಣ, ವಿಮಾನ ನಿಲ್ದಾಣದಲ್ಲಿ ವಿಶೇಷ ತಂಡಗಳನ್ನು ನೇಮಿಸಿ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗುವುದೆಂದು ಅವರು ಹೇಳಿದರು.

ಸಾರ್ವಜನಿಕರು ಮಾಸ್ಕ್ ಧರಿಸುವ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ಹಾಗೂ ನಿಯಮ ಪಾಲಿಸದವರ ವಿರುದ್ಧ ದಂಡ ವಿಧಿಸುವ ಕ್ರಮವನ್ನು ಕಠಿಣಗೊಳಿಸಬೇಕೆಂದು ಪೊಲೀಸ್ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸರ್ಕಾರದ ಸೂಚನೆಯಂತೆ ಜಿಲ್ಲೆಯ ಗ್ರಾಮೀಣ ಪ್ರದೇಶ ಹಾಗೂ ಮಹಾನಗರ ವ್ಯಾಪ್ತಿಯಲ್ಲಿ ನಡೆಯುವ ಮದುವೆ, ಸಭೆ-ಸಮಾರಂಭಗಳಲ್ಲಿ ಭಾಗವಹಿಸುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಈ ಕುರಿತು ಸ್ಥಾನಿಕವಾಗಿ ಹಾಜರಿದ್ದು ಪರಿಶೀಲಿಸಲು ಮತ್ತು ನಿಯಮ ಉಲ್ಲಂಘಿಸುವವರ ವಿರುದ್ಧ ಸ್ಥಳದಲ್ಲಿಯೇ ದಂಡ ವಿಧಿಸಲು ಮಾರ್ಷಲ್‌ಗಳನ್ನು ತಕ್ಷಣ ನೇಮಿಸುವಂತೆ ಮಹಾನಗರ ಪಾಲಿಕೆಯ ಆಯುಕ್ತರಿಗೆ ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.

ಅವಳಿ ನಗರದ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಠಾಣಾಧಿಕಾರಿ ಹಾಗೂ ಪಾಲಿಕೆಯ ವಲಯ ಅಧಿಕಾರಿ ಪ್ರತಿದಿನ ಮಾಸ್ಕ್ ಧರಿಸದವರನ್ನು ಗುರುತಿಸಿ ದಂಡ ವಿಧಿಸುವಂತೆ ಮತ್ತು ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಕುರಿತು ಎಚ್ಚರಿಕೆ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಪ್ರತಿಯೊಬ್ಬರು ಮಾಸ್ಕ್ ಧರಿಸುವುದರಿಂದ ಮತ್ತು ಪರಸ್ಪರ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರಿಂದ ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದರೊಂದಿಗೆ ಸಮಾಜಕ್ಕೂ ಉಪಕಾರ ಮಾಡಿದಂತಾಗುತ್ತದೆ. ಜನರು ಮಾಸ್ಕ್ ಧರಿಸುವುದೂ ಸಹ ಒಂದು ಸಾಮಾಜಿಕ ಸೇವೆ ಎಂದು ಭಾವಿಸಿ, ಪಾಲಿಸಬೇಕೆಂದು ಮತ್ತು ಈ ಮೂಲಕ ಸಮಾಜದ ಆರೋಗ್ಯ, ಸ್ವಾಸ್ಥ್ಯ ಕಾಪಾಡಲು ತಮ್ಮ ಕೊಡುಗೆ ನೀಡಬೇಕೆಂದು ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ವಿನಂತಿಸಿದರು.

ಮಹಾನಗರ ಪಾಲಿಕೆಯ ಆಯುಕ್ತ ಡಾ. ಸುರೇಶ್ ಇಟ್ನಾಳ ಮಾತನಾಡಿ, ಏಪ್ರೀಲ್ 2020ರಿಂದ ಫೆ.2021ರವರೆಗೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ 9,504 ಜನರ ಮೇಲೆ ಪ್ರಕರಣ ದಾಖಲಿಸಿ 21,66,900ರೂ. ಹಾಗೂ ಸಾಮಾಜಿಕ ಅಂತರ ಕಾಪಾಡದ 779 ಜನರ ಮೇಲೆ ಪ್ರಕರಣ ದಾಖಲಿಸಿ 1,55,800ರೂ. ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದ 50 ಜನರ ಮೇಲೆ ಪ್ರಕರಣ ದಾಖಲಿಸಿ 8,700ರೂ.ಗಳು ಸೇರಿದಂತೆ ಒಟ್ಟು 23,31,400ರೂ.ಗಳ ದಂಡ ವಸೂಲು ಮಾಡಲಾಗಿದೆ. ಪ್ರತಿದಿನ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಕಾಪಾಡುವ ಕುರಿತು ಡ್ರೈವ್ (ಅಭಿಯಾನ) ಗಳನ್ನು ಹೆಚ್ಚು ಮಾಡಲಾಗುವುದೆಂದು ಹೇಳಿದರು.

ಧಾರವಾಡ ಸಹಾಯಕ ಪೊಲೀಸ್ ಆಯುಕ್ತೆ ಜಿ. ಅನುಷಾ ಮಾತನಾಡಿ, ಅವಳಿ ನಗರ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಲ್ಲಿ ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರ ಕಾಪಾಡದ 1420 ಪ್ರಕರಣಗಳನ್ನು ದಾಖಲಿಸಿದ್ದು, 3,06,800ರೂ.ಗಳ ದಂಡ ವಿಧಿಸಲಾಗಿದೆ ಎಂದು ಹೇಳಿದರು.

ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಇನ್ಸ್‌ಪೆಕ್ಟರ್ ವಿಜಯ ಬಿರಾದಾರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕಳೆದ ಒಂದು ವಾರದಲ್ಲಿ ಮಾಸ್ಕ್ ಧರಿಸದ 228 ಪ್ರಕರಣಗಳನ್ನು ದಾಖಲಿಸಿ 22,800ರೂ. ದಂಡ ವಸೂಲು ಮಾಡಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ. ಬಿ. ಗೋಪಾಲಕೃಷ್ಣ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯಶವಂತ ಮದೀನಕರ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಸುಜಾತಾ ಹಸವೀಮಠ ಸೇರಿದಂತೆ ಆರೋಗ್ಯ, ಕಂದಾಯ, ಸಾರಿಗೆ, ಮಹಾನಗರ ಪಾಲಿಕೆ ಮತ್ತು ಪೊಲೀಸ್ ಇಲಾಖೆಯ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: AiroplaneBayaluseeme NewsCorporationCOVID 19DharwadDharwad DCKannada News WebsiteKeralaKSRTC BusLatest News KannadaMaharashtraMaskRTPCRSuperintendent of PoliceTrainಕೇರಳಕೋವಿಡ್-19ಜಿಲ್ಲಾಧಿಕಾರಿಧಾರವಾಡಪೊಲೀಸ್ ವರಿಷ್ಠಾಧಿಕಾರಿಬಯಲುಸೀಮೆಸುದ್ಧಿಮಹಾನಗರ ಪಾಲಿಕೆಮಹಾರಾಷ್ಟ್ರಮಾಸ್ಕ್‌ರೈಲುವಿಮಾನ
Share200Tweet123Send
Previous Post

ಅಗ್ನಿ ಅನಾಹುತ ತಡೆಯುವಿಕೆ ಕಾರ್ಯಾಗಾರ

Next Post

ಸೋಷಿಯಲ್ ಮೀಡಿಯಾಗೆ ಅಂಕುಶ: ಕೇಂದ್ರ ನೂತನ ಮಾರ್ಗಸೂಚಿಯಲ್ಲಿ ಏನಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೋಷಿಯಲ್ ಮೀಡಿಯಾಗೆ ಅಂಕುಶ: ಕೇಂದ್ರ ನೂತನ ಮಾರ್ಗಸೂಚಿಯಲ್ಲಿ ಏನಿದೆ?

ಸೋಷಿಯಲ್ ಮೀಡಿಯಾಗೆ ಅಂಕುಶ: ಕೇಂದ್ರ ನೂತನ ಮಾರ್ಗಸೂಚಿಯಲ್ಲಿ ಏನಿದೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL