ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣ ನಿಯಂತ್ರಣ ಹಾಗೂ ಒಟಿಟಿ ಪ್ಲಾಟ್ ಫಾರ್ಮ್‌ಗೆ ಕೇಂದ್ರ ಸರ್ಕಾರ ನೂತನ ಮಾರ್ಗಸೂಚಿಯನ್ನು ಪ್ರಕಟಿಸುವ ಮೂಲಕ ಮಹತ್ವದ ಹೆಜ್ಜೆಯನ್ನಿರಿಸಿದೆ.
ಈ ಕುರಿತಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಹಾಗೂ ರವಿಶಂಕರ್ ಪ್ರಸಾದ್ ಅವರುಗಳು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ಪ್ರಕಟಿಸಿದ್ದಾರೆ.
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಓವರ್ ದಿ ಟಾಪ್ ಪ್ಲಾಟ್‌ಫಾರ್ಮ್(ಒಟಿಟಿ) ಮತ್ತು ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ತಮ್ಮ ದುರುಪಯೋಗವನ್ನು ತಡೆಯಲು ಇದು ಸಹಕಾರಿಯಾಗಲಿದೆ ಎಂದಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಐಟಿ ಸಚಿವ ರವಿಶಂಕರ್ ಪ್ರಸಾದ್, ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳ ಅತಿರೇಕದ ದುರುಪಯೋಗ, ನಕಲಿ ಸುದ್ದಿಗಳ ಹರಡುವಿಕೆ, ಇತರ ಆತಂಕಗಳ ನಡುವೆ ಈ ಹೊಸ ನಿಯಮಗಳನ್ನು ಪರಿಚಯಿಸಲಾಗಿದೆ ಎಂದಿದ್ದಾರೆ.
ಮಾಧ್ಯಮಗಳ ಸ್ವಾತಂತ್ರ್ಯ ಕಲಾವಿದರ ಸೃಜನಶೀಲತೆಗೆ ಕಡಿವಾಣ ಹಾಕುವ ಉದ್ದೇಶ ನಮಗಿಲ್ಲ. ಆದರೆ ಜವಾಬ್ದಾರಿಯೊಂದಿಗೆ ಎಲ್ಲರೂ ಸ್ವಾತಂತ್ರ್ಯ ಬಳಸಿಕೊಳ್ಳುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದರು.
ಮಾಧ್ಯಮ ಯಾವುದೇ ಇದ್ದರೂ ಅದಕ್ಕೆ ಮಾರ್ಗದರ್ಶಿ ಸೂತ್ರಗಳು ಅಗತ್ಯ. ಇನ್ನು ಒಟಿಟಿ ವೇದಿಕೆಗಳನ್ನು ನ್ಯಾಯದಾನ ಪ್ರಕ್ರಿಯೆಯ ವ್ಯಾಪ್ತಿಯೊಳಗೆ ತರುವುದು ನಮ್ಮ ಉದ್ದೇಶವಾಗಿದೆ ಎಂದಿದ್ದಾರೆ.
ದೇಶದ ಸಾರ್ವಭೌಮತ್ವ, ಸಮಗ್ರತೆ, ಭದ್ರತೆ, ಶಾಂತಿ, ವಿದೇಶಾಂಗ ವ್ಯವಹಾರಗಳು ಹಾಗೂ ಅಶ್ಲೀಲ ಅಂಶಗಳ ಬಗ್ಗೆ ಪ್ರಚಾರ ಮಾಡುವವರ ವಿಷಯದಲ್ಲಿ ಈ ಕ್ರಮಗಳು ಅನ್ವಯವಾಗಲಿವೆ ಎಂದು ಸಚಿವರು ಹೇಳಿದರು.
ಸಾಮಾಜಿಕ ಮಾಧ್ಯಮಗಳ ದುರುಪಯೋಗ ಸಂಬಂಧ ದೂರು ಪರಿಹರಿಸುವ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಸಂಬಂಧಪಟ್ಟ ಕುಂದುಕೊರತೆ ನಿವಾರಣೆ ಅಧಿಕಾರಿ ಸದರಿ ದೂರನ್ನು 24 ಗಂಟೆಯೊಳಗೆ ದಾಖಲಿಸಿ 15 ದಿನದೊಳಗೆ ಆ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸಚಿವರು ವಿವರಿಸಿದರು.
ಮಹಿಳೆಯರ ಘನತೆಗೆ ದಕ್ಕೆ ತರುವಂತಹ ವಿಷಯದಲ್ಲಿ ಯಾವುದೇ ಅಶ್ಲೀಲ ಫೋಟೋಗಳನ್ನು ಬಳಸಬಾರದು. ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸುವ ಯಾವುದೇ ಫೋಟೋ ಅಪ್‌ಲೋಡ್ ಮಾಡಿದರೆ, ಈ ಸಂಬಂಧ ದೂರು ನೀಡಿದ 24 ಗಂಟೆಗಳಲ್ಲಿ ಆ ಫೋಟೋಗಳು ಹಾಗೂ ಸಂದೇಶಗಳನ್ನು ಅಳಿಸಬೇಕು ಎಂದು ಸಚಿವರು ಹೇಳಿದರು.
ಮಹಿಳೆಯರ ಮೇಲಿನ ಗೌರವದಿಂದ ಈ ನಿಯಮಗಳನ್ನು ರೂಪಿಸಲಾಗಿದೆ ಎಂದು ಸಚಿವರು ಹೇಳಿದರು. ಒಟಿಟಿ ಪ್ಲ್ಯಾಟ್‌ಫಾರ್ಮ್‌ಗಳ ಕಣ್ಗಾಗವಲಿಗೆ ಮೂರು ವಿಧಾನಗಳನ್ನು ಅನುಸರಿಸಲಿರುವುದಾಗಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದರು. ಒಟಿಟಿ ಗಳೊಂದಿಗೆ ಡಿಜಿಟಲ್ ಸುದ್ದಿ ಮಾಧ್ಯಮ ಸಂಸ್ಥೆಗಳು ತಮ್ಮ ವಿವರಗಳನ್ನು ಬಹಿರಂಗಪಡಿಸುವ ಅಗತ್ಯವಿದೆ. ಆದರೆ ನೋಂದಣಿ ಕಡ್ಡಾಯಗೊಳಿಸುವುದಿಲ್ಲ. ಆದರೆ ಅವುಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು ಎಂದು ಸಚಿವರು ವಿವರಿಸಿದರು. ಒಟಿಟಿ ಪ್ಲ್ಯಾಟ್‌ಫಾರ್ಮ್‌ಗಳ ಜೊತೆಗೆ ಡಿಜಿಟಲ್ ಪೋರ್ಟಲ್‌ಗಳಿಗೆ ಸಂಬಂಧಿಸಿದಂತೆ ದೂರು ಪರಿಹಾರ ವ್ಯವಸ್ಥೆ ಹೊಂದರಬೇಕು. ಒಟಿಟಿಗಳು ಸ್ವಯಂ ನಿಯಂತ್ರಣ ವ್ಯವಸ್ಥೆಯನ್ನು ಅಳವಳಿಸಿಕೊಂಡಿರಬೇಕು. ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಅಥವಾ ಹೈಕೋರ್ಟ್ ನ್ಯಾಯಾಧೀಶರು ಅಥವಾ ಪ್ರಮುಖ ವ್ಯಕ್ತಿಗಳು ಆ ಜವಾಬ್ದಾರಿ ನಿಭಾಯಿಸಲಿದ್ದಾರೆ.
ಪ್ರಮುಖ ಅಂಶಗಳು:
ಸಾಮಾಜಿಕ ಮಾಧ್ಯಮ ವೇದಿಕೆಗಳು ಭಾರತದಲ್ಲಿ ವ್ಯಾಪಾರ ಮಾಡಲು ಸ್ವಾಗತಿಸುತ್ತವೆ ಆದರೆ ಅವರು ಭಾರತದ ಸಂವಿಧಾನ ಮತ್ತು ಕಾನೂನುಗಳನ್ನು ಅನುಸರಿಸಬೇಕು.
ಪ್ರಶ್ನೆಗಳನ್ನು ಕೇಳಲು ಮತ್ತು ಟೀಕಿಸಲು ಸಾಮಾಜಿಕ ಮಾಧ್ಯಮ ವೇದಿಕೆಯನ್ನು ಖಂಡಿತವಾಗಿ ಬಳಸಬಹುದು.
ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು ಸಾಮಾನ್ಯ ಬಳಕೆದಾರರಿಗೆ ಅಧಿಕಾರ ನೀಡಿವೆ ಆದರೆ ಅದರ ದುರುಪಯೋಗ ಮತ್ತು ದುರುಪಯೋಗದ ವಿರುದ್ಧ ಅವರಿಗೆ ಹೊಣೆಗಾರಿಕೆಬೇಕು.
ಹೊಸ ನಿಯಮಗಳು ಸಾಮಾಜಿಕ ಮಾಧ್ಯಮದ ಸಾಮಾನ್ಯ ಬಳಕೆದಾರರಿಗೆ ಅಧಿಕಾರ ನೀಡುತ್ತವೆ. ಅವರ ಕುಂದುಕೊರತೆಗಳನ್ನು ಪರಿಹರಿಸಲು ಮತ್ತು ಸಮಯೋಚಿತವಾಗಿ ಪರಿಹರಿಸುವ ಕಾರ್ಯವಿಧಾನವನ್ನು ರೂಪಿಸುತ್ತವೆ.
ನೂತನ ಮಾರ್ಗಸೂಚಿ ಹೀಗಿದೆ:
ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು ಬಳಕೆದಾರರ ಸ್ವಯಂಪ್ರೇರಿತ ಪರಿಶೀಲನೆಗೆ ಅವಕಾಶ ಹೊಂದಿರಬೇಕು.
ಫೇಕ್ ನ್ಯೂಸ್ ಮಾಹಿತಿಯ ಮೊದಲು ಶೇರ್ ಮಾಡಿದವರ ವಿವರವನ್ನು ನ್ಯಾಯಾಲಯ ಅಥವಾ ಸರ್ಕಾರ ಕೇಳಿದರೆ ಸಾಮಾಜಿಕ ಮಾಧ್ಯಮ ವೇದಿಕೆಗಳು ನೀಡುವುದು ಅಗತ್ಯ.
ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಕುಂದುಕೊರತೆ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ದೂರು ದಾಖಲಾದ 24 ಗಂಟೆಗಳಲ್ಲಿ ಆಕ್ಷೇಪಾರ್ಯ ವಿವರವನ್ನು ನಿಷ್ಕ್ರಿಯಗೊಳಿಸಬೇಕು. ಇನ್ನು ನೋಡಲ್ ಅಧಿಕಾರಿ ಭಾರತೀಯ ನಿವಾಸಿಯಾಗಿರಬೇಕು.
ಸಾಮಾಜಿಕ ಮಾಧ್ಯಮ ವೇದಿಕೆಗಳು ಮಾಸಿಕ ಅನುಸರಣೆ ವರದಿಗಳನ್ನು ಸಲ್ಲಿಸಬೇಕಾಗುತ್ತದೆ.
ಇದಲ್ಲದೆ, ಸಾಮಾಜಿಕ ಮಾಧ್ಯಮದಲ್ಲಿ ಮಹಿಳೆಯರ ನಗ್ನತೆ, ಮಾರ್ಫಡ್ ಚಿತ್ರಗಳನ್ನು ಒಳಗೊಂಡ ವಿಷಯವನ್ನು 24 ಗಂಟೆಗಳಲ್ಲಿ ತೆಗೆದುಹಾಕಬೇಕು.
ಹಿನ್ನೆಲೆ:
ಡಿಜಿಟಲ್ ಇಂಡಿಯಾ ಕಾರ್ಯಕ್ರಮವು ಈಗ ಸಾಮಾನ್ಯ ಭಾರತೀಯರನ್ನು ತಂತ್ರಜ್ಞಾನದ ಶಕ್ತಿಯಿಂದ ಸಬಲೀಕರಣಗೊಳಿಸುವ ಚಳುವಳಿಯಾಗಿ ಮಾರ್ಪಟ್ಟಿದೆ. ಮೊಬೈಲ್ ಫೋನ್, ಇಂಟರ್ನೆಟ್ ಇತ್ಯಾದಿಗಳ ವ್ಯಾಪಕ ಹರಡುವಿಕೆಯು ಅನೇಕ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಭಾರತದಲ್ಲಿ ತಮ್ಮ ಹೆಜ್ಜೆಗುರುತುಗಳನ್ನು ವಿಸ್ತರಿಸಲು ಸಹಕಾರಿಯಾಗಿದೆ. ಸಾಮಾನ್ಯ ಜನರು ಸಹ ಈ ಪ್ಲಾಟ್‌ಫಾರ್ಮ್‌ಗಳನ್ನು ಬಹಳ ಮಹತ್ವದ ರೀತಿಯಲ್ಲಿ ಬಳಸುತ್ತಿದ್ದಾರೆ. ಕೆಲವು ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಬಗ್ಗೆ ವಿಶ್ಲೇಷಣೆಯನ್ನು ಪ್ರಕಟಿಸುತ್ತವೆ ಮತ್ತು ವಿವಾದಾಸ್ಪದವಾಗಿಲ್ಲ, ಈ ಕೆಳಗಿನ ಸಂಖ್ಯೆಗಳನ್ನು ಭಾರತದ ಪ್ರಮುಖ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಬಳಕೆದಾರರ ಮೂಲವೆಂದು ವರದಿ ಮಾಡಿದೆ:
ವಾಟ್ಸಾಪ್ ಬಳಕೆದಾರರು: 53 ಕೋಟಿ
ಯೂಟ್ಯೂಬ್ ಬಳಕೆದಾರರು: 44.8 ಕೋಟಿ
ಫೇಸ್‌ಬುಕ್ ಬಳಕೆದಾರರು: 41 ಕೋಟಿ
ಇನ್‌ಸ್ಟಾಗ್ರಾಮ್ ಬಳಕೆದಾರರು: 21 ಕೋಟಿ
ಟ್ವಿಟರ್ ಬಳಕೆದಾರರು: 1.75 ಕೋಟಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post