ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಬೆಂಗೆಳೂರು ಸುರ್ವೆ ಕಲ್ಚರ್ ಅಕಾಡಮಿ, ಕೊಪ್ಪಳ ಜಿಲ್ಲೆಯ ಕನ್ನಡ ಸಾಹಿತ್ಯ ಸಂಸ್ಕೃತಿ ಮತ್ತು ಅಭಿವೃದ್ದಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಫೆ.28ರ ಭಾನುವಾರ ಕಲ್ಯಾಣ ಕರ್ನಾಟಕ ಪ್ರವಾಸಿ ಉತ್ಸವ 2021 ಮತ್ತು ವಿಜಯನಗರ ಕರ್ನಾಟಕ ಪತ್ರಿಕೆಯ ದ್ವಿತೀಯ ಸಾಂಸ್ಕೃತಿಕ ಸಮ್ಮೇಳನ ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಮಾಜಿ ಅಧ್ಯಕ್ಷ ಕಮ್ಮತ್ತ ಮರಿಕುಂಟೆ ಹೆಚ್. ಆಂಜನೇಯ ಇವರಿಗೆ ಕಲ್ಯಾಣ ಕರ್ನಾಟಕ ರತ್ನ ರಾಜ್ಯಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಕಾಡಮಿ ರಾಜ್ಯಾಧ್ಯಕ್ಷ ರಮೇಶ ಸುರ್ವ, ಚಿತ್ರದುರ್ಗ ಜಿಲ್ಲಾಧ್ಯಕ್ಷ ಆರ್. ಧ್ಯಾಮರಾಜ್, ಡಿ.ವೀರಣ್ಣ, ಜಾಲಿಮಂಜುನಾಥ, ಕಾರ್ಯನಿರತ ಪರ್ತಕರ್ತರ ಸಂಘ ತಾಲ್ಲೂಕು ಅಧ್ಯಕ್ಷ ಡಿ.ಈಶ್ವರಪ್ಪ, ನಾವೇಲ್ಲಾ ಮಹೇಶ, ಎಸ್.ಸುರೇಶ ಬೆಳಗೆರೆ ತಿಳಿಸಿದ್ದಾರೆ.

ಹಿರಿಯ ಪತ್ರಕರ್ತ, ಚಲನಚಿತ್ರ ನಿರ್ದೇಶಕ ರಮೇಶ ಸುರ್ವೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















