ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನಾಯಕನಹಟ್ಟಿ: ಶ್ರೀಗುರು ತಿಪ್ಪೇರುದ್ರಸ್ವಾಮಿ ವಿಜೃಂಭಣೆಯ ಮಹಾರಥೋತ್ಸವವನ್ನು ಪ್ರಸಕ್ತ ವರ್ಷ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಪರ್ಯಾಯವಾಗಿ ವಿಧಿ ವಿಧಾನಗಳ ಪ್ರಕಾರ ಚಿಕ್ಕ ರಥೋತ್ಸವ ನಡೆಸಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಾರ್ಚ್ 29ರಂದು ನಡೆಯಲಿರುವ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ಮಹಾರಥೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಸ್ಥಳೀಯರು ಸರಳವಾಗಿ ಆಚರಣೆ ಮಾಡಬಹುದು. ಮಹಾರಥದಂತೆ ಚಿಕ್ಕ ರಥಕ್ಕೆ ಅಲಂಕಾರಿಸಿ ವಿಧಿವಿಧಾನಗಳ ಪ್ರಕಾರ ನಿಯಮಾನುಸಾರವಾಗಿ ಆಚರಿಸಬಹುದು ಎಂದರು.
ಜಾತ್ರೆಯಲ್ಲಿ ಪ್ರಾಣಿಬಲಿ, ಬಾಡೂಟ, ಟೆಂಟ್ ಹಾಕುವುದು, ವಾಹನ ಮತ್ತು ಸಾರಿಗೆ ವ್ಯವಸ್ಥೆ, ಪ್ರದರ್ಶನಗಳು, ಹೊರ ಜಿಲ್ಲೆ ಮತ್ತು ಹೊರರಾಜ್ಯಗಳಿಂದ ಆಗಮಿಸುವ ಭಕ್ತರಿಗೆ ನಿಷೇಧಿಸಲಾಗಿದೆ. ಜಾತ್ರೆಯಲ್ಲಿ ಆರೋಗ್ಯ ವ್ಯವಸ್ಥೆ, ಕಾಪಾಡುವುದು ಕುಡಿಯುವ ನೀರಿನ ವ್ಯವಸ್ಥೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದು ವಿವರಿಸಿದರು.
ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆಯನ್ನ ಕಾಪಾಡಿಕೊಂಡು ಹೋಗಲು ತಮ್ಮ ನೆಂಟರನ್ನು ಸಂಬಂಧಿಕರನ್ನು ಆಹ್ವಾನಿಸುವುದನ್ನು ಕೈಬಿಡುವುವಂತೆ ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲ ಮನವಿ ಮಾಡಿಕೊಂಡರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಜಿಲ್ಲಾ ವರಿಷ್ಠಾಧಿಕಾರಿ ಜೆ. ರಾಧಿಕಾ, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ದೇವಿ, ಜಿಲ್ಲಾ ಆರೋಗ್ಯ ಅಧಿಕಾರಿ ಟಿ ಪಾಲಾಕ್ಷಪ್ಪ, ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ಬಿ ವಾಲಿ, ಚಳ್ಳಕೆರೆ ತಾಲೂಕು ಪಂಚಾಯತಿ ಅಧ್ಯಕ್ಷ ತಿಪ್ಪೇಸ್ವಾಮಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಎನ್. ಮಹಾಂತಣ್ಣ ಹಾಗೂ ಸದಸ್ಯರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಾರ್ವಜನಿಕ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post