ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಫೆ.28ರ ಭಾನುವಾರ ಮತ್ತು ಮಾರ್ಚ್ 1ರಂದು ಎರಡು ದಿನಗಳ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಅದರ ಬಗ್ಗೆ ಮಾಹಿತಿ ಹೀಗಿದೆ.
ಫೆ.28ರಂದು ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು, 10:55ಕ್ಕೆ ಸೊರಬ ತಾಲೂಕಿನ ತಲ್ಲೂರು ಗ್ರಾಮದ ಹೆಲಿಪ್ಯಾಡ್‌ನಲ್ಲಿ ಬಂದಿಳಿಯಲಿದ್ದಾರೆ. ನಂತರ 11:10ಕ್ಕೆ ಆನವಟ್ಟಿಯ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿರುವ ಮೂಗೂರು ಕೆರೆ ತುಂಬಿಸುವ ಯೋಜನೆ ಲೋಕಾರ್ಪಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭದಲ್ಲಿ ಪಾಲ್ಗೊಂಡು ಮಧ್ಯಾಹ್ನ 12:45ಕ್ಕೆ ಶಿಕಾರಿಪುರಕ್ಕೆ ತೆರಳಲಿದ್ದಾರೆ.

ಸಂಜೆ 4ಗಂಟೆಗೆ ಶಿಕಾರಿಪುರದ ಟಿಎಪಿಸಿಎಮ್‌ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹೆಲಿಕಾಪ್ಟರ್ ಮೂಲಕ 4:50ಕ್ಕೆ ಶಿವಮೊಗ್ಗ ತಲುಪಲಿದ್ದು, 5ಗಂಟೆಗೆ ಮೆಡಿಕಲ್ ಕಾಲೇಜು ಅಸೋಸಿಯೆಷನ ಭವನದ ಸಮಾರಂಭವನ್ನು ಉದ್ಘಾಟಿಸುವರು.
5:30ಕ್ಕೆ ವಿನೋಬನಗರ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, 5:45ಕ್ಕೆ ರಾಜೇಂದ್ರ ನಗರ ಹಳೇ ಜೈಲು ಆವರಣದಲ್ಲಿ ಜಿಲ್ಲಾಡಳಿತ ಮತ್ತು ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿಮಿಟೆಡ್ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಶಿವಮೊಗ ಸ್ಮಾರ್ಟ್ ಸಿಟಿ ವತಿಯಿಂದ ಹಳೇಜೈಲು ಆವರಣ (ಫ್ರೀಡಂ ಪಾರ್ಕ್)ದಲ್ಲಿ ಬಹು ಉಪಯುಕ್ತತಾ ಸ್ಥಳದ ಅಭಿವೃದ್ಧಿಯ ಭಾಗಶಃ ಅನುಷ್ಠಾನ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾವಹಿಸಲಿದ್ದಾರೆ.

6ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಅಭಿನಂದನಾ ಸಮಿತಿ ವತಿಯಿಂದ ಏರ್ಪಡಿಸಿರುವ ನಮ್ಮೊಲುಮೆ ಅಭಿಮಾನದ ಅಭಿನಂದನಾ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದು, ಅಂದು ಶಿವಮೊಗ್ಗದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮಾರ್ಚ್ 1ರ ಸೋಮವಾರ ಬೆಳಿಗ್ಗೆ 9ಗಂಟೆಗೆ ಎನ್‌ಡಿವಿ ಹಾಸ್ಟೆಲ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, 9:30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















