ಭದ್ರಾವತಿ: ಎರಡು ದಿನಗಳ ಕಾಲ ವ್ಯವಸ್ಥಿತವಾಗಿ ನಡೆದ ಕಬಡ್ಡಿ ಪಂದ್ಯಾವಳಿಯ ಯಶಸ್ಸನ್ನು ಸಹಿಸದೇ ಕೋಮುವಾದಿ ಮನಃಸ್ಥಿತಿಯ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಅನಾವಶ್ಯಕವಾಗಿ ಅಶಾಂತಿ ಮೂಡಿಸುತ್ತಿದ್ದಾರೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ ಹೇಳಿದ್ದಾರೆ.
ಕಬಡ್ಡಿ ಪಂದ್ಯಾವಳಿ ಪೈನಲ್ಸ್ ವೇಳೆ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಮಾತನಾಡಿರುವ ಅವರು, ಈ ಪಂದ್ಯಾವಳಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಇದನ್ನು ಸಹಿಸದ ಕೋಮುವಾದಿಗಳು ನಮ್ಮ ಹೆಸರಿಗೆ ಮಸಿ ಬಳಿಯುವ ದುರುದ್ದೇಶದಿಂದ ಈ ಘಟನೆಯನ್ನು ಸೃಷ್ಠಿಸಿದ್ದಾರೆ ಎಂದು ದೂರಿದ್ದಾರೆ.
ಬಿಜೆಪಿ ಹಾಗೂ ಬಜರಂಗದಳದ ಸ್ಥಳೀಯ ಮುಖಂಡರು ನಗರದಲ್ಲಿ ಅಶಾಂತಿ ಮೂಡಿಸಿ, ಕೋಮುಗಲಭೆ ಸೃಷ್ಠಿಸಲು ಇಂತಹ ಕೆಲಸ ಮಾಡಿದ್ದಾರೆ. ಹೀಗಾಗಿ, ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಬೇಕು. ಇಲ್ಲದೇ ಹೋದಲ್ಲಿ ನಮ್ಮ ನಾಯಕರಾದ ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯನವರನ್ನು ನಗರಕ್ಕೆ ಕರೆಸಿ, ಬೃಹತ್ ಪ್ರತಿಭಟನೆ ನಡೆಸುವುದು ಮಾತ್ರವಲ್ಲಿ ಭದ್ರಾವತಿ ಬಂದ್ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Discussion about this post