ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಯುವತಿಗೆ ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಸಚಿವ ರಮೇಶ್ ಜಾರಕಿಹೊಳಿ ಅವರಿಂದ ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ಪಡೆಯಬೇಕು ಹಾಗೂ ಕರ್ನಾಟಕ ಭವನವನ್ನು ಕೆಟ್ಟ ಉದ್ದೇಶಕ್ಕೆ ಬಳಸಿಕೊಂಡಿರುವ ರಮೇಶ್ ಜಾರಕಿಹೊಳಿ ಅವರು ನಮ್ಮ ರಾಜ್ಯದ ಘನತೆಗೆ ಕಪ್ಪು ಚುಕ್ಕೆ ಈ ಕೂಡಲೇ ಶಾಸಕ ಸ್ಥಾನದಿಂದಲೂ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಜಾಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ರೇಷ್ಮ ಜಾವೇದ್ ಆಗ್ರಹಿಸಿದ್ದಾರೆ.
ಮಹಿಳಾ ದಿನಾಚರಣೆ ಹತ್ತಿರ ಇರುವಾಗಲೇ ಇಂತಹ ಘಟನೆ ಹೊರಬಂದಿರುವುದು ನಾಚಿಕೆಗೇಡು. ಬಿಜೆಪಿ ಸರ್ಕಾರಕ್ಕೆ ಮಹಿಳಾ ದಿನಾಚರಣೆ ನಡೆಸಲು ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.
ಸದನದಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದವರಿಗೆ ಸಚಿವ ಸ್ಥಾನ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಿಮ್ಮ ಸರ್ಕಾರದ ಮೇಲೆ ಮಹಿಳೆಯರಿಗೆ ಕಿಂಚಿತ್ತೂ ನಂಬಿಕೆ ಇಲ್ಲ. ಈ ಕೂಡಲೇ ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆಯದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೇ, ನೀವು ಈ ಕೂಡಲೇ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಹಾಗೂ ಯುವತಿಯ ಕುಟುಂಬಸ್ಥರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post