ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೊರಬ: ಇತ್ತೀಚೆಗೆ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆಯಂತಹ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ತುರ್ತಾಗಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಸೊರಬ ವಕೀಲರ ಸಂಘ ಆಗ್ರಹಿಸಿದೆ.
ಈ ಕುರಿತಂತೆ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದ ನಂತರ ಮಾತನಾಡಿದ ಸಂಘದ ಪ್ರಮುಖರು, ಹೊಸಪೇಟೆಯ ನ್ಯಾಯಾಲಯದ ಆವರಣದಲ್ಲಿ ವೆಂಕಟೇಶ್ ತಾರಿಹಳ್ಳಿ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವುದು ಖಂಡನೀಯ ವಿಚಾರ. ಇಂತಹ ಕೃತ್ಯಗಳನ್ನು ತಡೆಯುವ ಸಲುವಾಗಿ ಕಾಯ್ದೆಯನ್ನು ತುರ್ತಾಗಿ ಜಾರಿಗೆ ತರಬೇಕು ಎಂದರು.
ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗಮನವನ್ನು ಸೆಳೆಯಲು ಅಂದರೆ ವಕೀಲರ ಸಂರಕ್ಷಣಾ ಕಾಯ್ದೆಯನ್ನು ತುರ್ತಾಗಿ ಜಾರಿಗೆ ತರಬೇಕು ಎಂಬ ಕುರಿತಾಗಿ ಎಷ್ಟೇ ಪ್ರಯತ್ನ ಪಟ್ಟರೂ ಪ್ರಯೋಜನಕಾರಿಯಾಗಿಲ್ಲ. ಈ ಒಂದು ಕೃತ್ಯ ವಕೀಲರಿಗೆ ಯಾವುದೇ ಒಂದು ನ್ಯಾಯಯುತವಾದ ರಕ್ಷಣೆ ಇಲ್ಲದೇ ಇರುವುದೇ ಕಾರಣವಾಗಿದೆ. ಈ ವಿಚಾರವನ್ನು ಖಂಡಿಸುವ ಜೊತೆಯಲ್ಲಿ ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ಮರುಕಳಿಸದಂತೆ ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸುವ ವಕೀಲರ ಸಂರಕ್ಷಣಾ ಕಾಯ್ದೆಯನ್ನು ತುರ್ತಾಗಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಕೆ.ಬಿ. ಬಸವರಾಜ್, ಉಪಾಧ್ಯಕ್ಷ ಆರ್.ಎಚ್. ಯುವರಾಜ್, ಕಾರ್ಯದರ್ಶಿ ಸಿ.ವೈ. ಅಶೋಕ್, ಖಜಾಂಚಿ ಎಚ್. ಗೋಪಾಲ್ ಸೇರಿದಂತೆ ಹಲವರು ಇದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post