ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಬಿಸಿಯೂಟ ಕಾರ್ಯಕರ್ತರಿಗೆ ಕನಿಷ್ಠ ವೇತನವೂ ಸೇರಿದಂತೆ ಇನ್ನಿತರ ಸೌಲಭ್ಯಗಳಿಗಾಗಿ ಸರ್ಕಾರವನ್ನು ಒತ್ತಾಯ ಪಡಿಸುವುದಾಗಿ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಭರವಸೆ ನೀಡಿದರು.
ಅವರು ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್(ಎಐಟಿಯುಸಿ) ಮೂರನೇ ತಾಲ್ಲೂಕು ಸಮ್ಮೇಳನವನ್ನು ತಮಟೆ ಭಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸಂಚಾಲಕ ಸಿ.ವೈ. ಶಿವರುದ್ರಪ್ಪ ಮಾತನಾಡಿ, ಸರ್ಕಾರ ಬಿಸಿಯೂಟ ಕಾರ್ಯಕರ್ತರಿಗೆ 18 ಸಾವಿರ ಮಾಸಿಕ ಕನಿಷ್ಠ ವೇತನ, ಮೂರು ಸಾವಿರ ಪಿಂಚಣಿ, ಎಎಸ್‌ಐ, ಪಿಎಫ್ ಸೌಲಭ್ಯ ನೀಡಬೇಕು, ಸೇವಾ ಭದ್ರತೆ ಒದಗಿಸಬೇಕು, ಕೆಲಸದ ಸಂದರ್ಭದಲ್ಲಿ ಮೃತಪಟ್ಟರೆ ಅವರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಬೇಕು, ಬಿಸಿಯೂಟ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವಲ್ಲಿ ಮುಖ್ಯಮಂತ್ರಿಗಳು ಗಮನಹರಿಸಬೇಕು ಎಂದರು.
ವೇದಿಕೆಯಲ್ಲಿ ಜಿಲ್ಲಾ ಸಂಚಾಲಕ ದೊಡ್ಡಉಳ್ಳಾರ್ತಿ ಕರಿಯಣ್ಣ, ನಗರಸಭಾ ಅಧ್ಯಕ್ಷೆ ಸಿ.ಬಿ.ಜಯಲಕ್ಷಿ, ಕೃಷ್ಣಮೂರ್ತಿ ಇನ್ನಿತರರು ಉಪಸ್ಥಿತರಿದ್ದರು. ಸಮ್ಮೇಳನಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post