ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಇದ್ದರು ಎನ್ನಲಾದ ವಿಡಿಯೋ ಬಿಡುಗಡೆಗೊಳಿಸಿ ಭಾರಿ ಸಂಚಲನ ಮೂಡಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದಿನೇಶ್ ವಿರುದ್ಧ ಕರ್ನಾಟಕ ಕನ್ನಡಪರ ಓಕ್ಕೂಟದಿಂದ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.
ರಮೇಶ್ ಜಾರಕಿಹೊಳಿ ಅವರ ತೇಜೋವಧೆ ಮಾಡಲು ವಿಡಿಯೋ ಬಹಿರಂಗಗೊಳಿಸಲಾಗಿದೆ. ಇದೊಂದು ರಾಜಕೀಯ ಷಡ್ಯಂತ್ರ. ದಿನೇಶ್ ಕಲ್ಲಹಳ್ಳಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಅನ್ಯಾಯ ಆಗಿರುವುದು ಯುವತಿಗೆ. ಆದರೆ, ಯುವತಿ ಇದೂವರೆಗೆ ದೂರು ನೀಡಿಲ್ಲ. ಹೀಗಾಗಿ ಈ ವಿಷಯದಲ್ಲಿ ಸಾಕಷ್ಟು ಅನುಮಾನಗಳು ಮೂಡುತ್ತವೆ. ವೀಡಿಯೋವನ್ನು ಸಂಪೂರ್ಣವಾಗಿ ಎಡಿಟ್ ಮಾಡಿಸಲಾಗಿದೆ. ಅದನ್ನು ಮಾಡಿಸಿದ್ದು ಯಾರು? ಎಂಬ ಬಗ್ಗೆ ಮಾಹಿತಿ ಇಲ್ಲ. ಇದು ಬ್ಲ್ಯಾಕ್ ಮೇಲ್ ರಾಜಕಾರಣ. ಹಾಗಾಗಿ ದಿನೇಶ್ ಕಲ್ಲಹಳ್ಳಿ ವಿರುದ್ಧ ತನಿಖೆ ನಡೆಸಬೇಕಿದೆ ಎಂದು ಕರ್ನಾಟಕ ಕನ್ನಡ ಒಕ್ಕೂಟದ ಅಧ್ಯಕ್ಷ ಪುಟ್ಟೇಗೌಡ ದೂರು ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post