ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೊಲ್ಲೂರು: ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಮಾದರಿಯಾಗಿ ರೂಪಿಸುವಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಕೊಲ್ಲೂರಿನಲ್ಲಿಯೂ ಒಳಚರಂಡಿ, ಕುಡಿಯುವ ನೀರು, ರಿಂಗ್ ರೋಡ್ ಯೋಜನೆ ಪ್ರಗತಿಯಲ್ಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಉಡುಪಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಅಮ್ಮ ವಿಶ್ರಾಂತಿಗೃಹವನ್ನು ಲೋಕಾರ್ಪಣೆಗೊಳಿಸಿ ಬಳಿಕ ವರು ಮಾತನಾಡಿದರು.
ಜಿ. ಶಂಕರ್ ಅವರು ನೂರಾರು ಸೇವಾ ಕಾರ್ಯಗಳನ್ನು ಕೈಗೊಂಡು ಜನರಿಗೆ ನೆರವಾಗುತ್ತಲೇ ಬಂದಿದ್ದಾರೆ. ಇದೀಗ ಅಮ್ಮ ವಿಶ್ರಾಂತಿಗೃಹ ನಿರ್ಮಿಸಿ ಕೊಡುವ ಮೂಲಕ ತಾಯಿಯ ಸೇವೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ಬಾಲ್ಯದಲ್ಲಿ ತಂದೆ ತಾಯಿಯೊಂದಿಗೆ ಕೊಲ್ಲೂರು ಕ್ಷೇತ್ರಕ್ಕೆ ಬರುತ್ತಿದ್ದೆ. ಇಂದು ಅದೇ ಕ್ಷೇತ್ರದಲ್ಲಿ ಸೇವೆ ಮಾಡುವ ಅವಕಾಶವನ್ನು ತಾಯಿ ಕರುಣಿಸಿದ್ದಾಳೆ. ಕ್ಷೇತ್ರದಲ್ಲಿ ಕೇಬಲ್ ಕಾರ್ ಯೋಜನೆಯನ್ನು ಜಾರಿಗೊಳಿಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೋಡಲಾಗುವುದು ಎಂದರು.
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಎಷ್ಟೇ ದುಡಿದರೂ ಕೊನೆಯಲ್ಲಿ ಎಲ್ಲವನ್ನು ಬಿಟ್ಡು ಹೋಗಬೇಕಾಗುತ್ತೆ. ಇರುವಷ್ಟು ಕಾಲ ಸಮಾಜ ಸೇವೆಯಲ್ಲಿ ತೊಡಗಿಕೊಂಡರೆ ಬದುಕು ಸಾರ್ಥಕವಾಗುತ್ತದೆ ಎಂದರು.
ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಎಸಿ ಕೆ. ರಾಜು, ಕೊಲ್ಲೂರು ಗ್ರಾಪಂ ಅಧ್ಯಕ್ಷ ಶಿವರಾಮಕೃಷ್ಣ ಭಟ್, ಜಿಪಂ ಸದಸ್ಯರಾದ ಶಂಕರ ಪೂಜಾರಿ, ಶ್ರೀಮೂಕಾಂಬಿಕಾ ದೇವಳದ ಆಡಳಿತಾಧಿಕಾರಿ ಎಸ್.ಪಿ.ಬಿ. ಮಹೇಶ್, ಅರ್ಚಕರಾದ ರಾಮಚಂದ್ರ ಅಡಿಗ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post