ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಶಾಂತಿನಗರ ರಾಗಿಗುಡ್ಡ, ತಾವರೆಚಟ್ನಹಳ್ಳಿ, ತರಳಬಾಳು ಬಡಾವಣೆ, ಹೊನ್ನಾಳಿ ರಸ್ತೆ, ಬೊಮ್ಮನಕಟ್ಟೆ ಎ ರಿಂದ ಹೆಚ್ ಬ್ಲಾಕ್‌ರವರೆಗೆ, ಶಿವಬಸವನಗರ, ಇಂದಿರಾಗಾಂಧಿ ಬಡಾವಣೆ, ಕುವೆಂಪುನಗರ, ಸೂಡಾ ಲೇಔಟ್, ತ್ರೀಮೂರ್ತಿನಗರ ನವುಲೆ, ಮಾರುತಿ ಬಡಾವಣೆ, ಸವಳಂಗರಸ್ತೆ, ಸರ್ಜಿ ಕನ್ವೆಷನಲ್ ಹಾಲ್, ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ದೇವಂಗಿ 1 ಮತ್ತು 2ನೇ ಹಂತ, ಬಸವೇಶ್ವರನಗರ, ಡಾಲರ್‍ಸ್ ಕಾಲೋನಿ, ಪವನಶ್ರೀ ಬಡಾವಣೆ, ಕೃಷಿನಗರ 1ನೇ ಮತ್ತು 2ನೇ ಮುಖ್ಯರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬಲ್ಸ್ ಅಪಾರ್ಟ್‌ಮೆಂಟ್, ರೆಡ್ಡಿ ಲೇಔಟ್, ಜೆ.ಎನ್‌ಎನ್‌ಸಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾರ್ಚ್ 5ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹಾಗೂ ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜ್, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.
ಆಲ್ಕೊಳ ವಿವಿ ಕೇಂದ್ರ:
ಆಲ್ಕೊಳ ವಿವಿ ಕೇಂದ್ರದಿಂದ ಸರಬರಾಜಾಗುವ ಕೇಂದ್ರದಿಂದ ಸರಬರಾಜಾಗುವ ಫೀಡರ್-11ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಶಾರದಮ್ಮ ಲೇಔಟ್, ಮೈತ್ರಿ ಅಪಾಟ್‌ಮೆಂಟ್, ದೇವರಾಜ ಅರಸ್ ಬಡಾವಣೆ, ಕನಕ ಲೇಔಟ್, ದೂರವಾಣಿ ಬಡಾವಣೆ, ಸೂರ್ಯ ಲೇಔಟ್, ಅರವಿಂದ ನಗರ, ಪೊಲೀಸ್ ಚೌಕಿ, ಮೇದಾರ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾರ್ಚ್ ೫ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನ.ಉ.ವಿ.-3ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post