ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಪುತ್ರ ಬಸವೇಶ್ ಅವರನ್ನು ಇಂದು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಕಳೆದ ವಾರ ನಡೆದ ಪ್ರೊ ಕಬಡ್ಡಿ ಪಂದ್ಯಾವಳಿ ಫೈನಲ್ಸ್ ವೇಳೆಯಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಬಿಜೆಪಿ ಮುಖಂಡರ ಮೇಲೆ ಬಸವೇಶ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರು ಪರ-ವಿರೋಧವಾಗಿ ನಗರದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದರು.
ಘಟನೆ ಹಿನ್ನೆಲೆಯಲ್ಲಿ ಶಾಸಕರ ಪುತ್ರನ ಬಂಧನಕ್ಕೆ ಭಾರೀ ಒತ್ತಡವಿತ್ತು. ಅಜ್ಞಾತ ಸ್ಥಳದಲ್ಲಿದ್ದ ಇಂದು ನಸುಕಿನಲ್ಲಿ ಬಸವೇಶ್ ಅವರನ್ನು ಬಂಧಿಸಿರುವ ಭದ್ರಾವತಿ ಪೊಲೀಸರು ನಗರಕ್ಕೆ ಕರೆ ತಂದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿಯಲ್ಲಿ ಇವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.
ನಗರಕ್ಕೆ ಕರೆ ತಂದ ತತಕ್ಷಣವೇ ನ್ಯಾಯಾಧೀಶರ ಮುಂದೆ ಬಸವೇಶ್ ಅವರನ್ನು ಹಾಜರಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಸವೇಶ್ ಅವರನ್ನು ಮಲವಗೊಪ್ಪದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಇರಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಮಂದಿಯನ್ನು ಬಂಧಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post