ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇರುವಂತೆಯೇ ಶಿವಮೊಗ್ಗ ಹಾಗೂ ಮೈಸೂರಿನಲ್ಲಿ ಕಿದ್ವಾಯಿ ಮಾದರಿಯಲ್ಲಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ರಾಜ್ಯ ಬಜೆಟ್ ಭಾಷಣದಲ್ಲಿ ಇದನ್ನು ಪ್ರಸ್ತಾಪಿಸಿರುವ ಅವರು ಕಿದ್ವಾಯಿ ಮಾದರಿಯಲ್ಲೇ ಶಿವಮೊಗ್ಗ ಹಾಗೂ ಮೈಸೂರಿನಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದ್ದು, ಇದಕ್ಕಾಗಿ 100 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ ಎಂದರು.
ಇನ್ನು, ಈಗಾಗಲೇ ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿರುವ ಸರ್ಕಾರಿ ಆರ್ಯುವೇದಿಕ್ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೆ ಏರಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಬಜೆಟ್’ನಲ್ಲಿ ಘೋಷಣೆ ಮಾಡಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post