ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಶಾಸಕ ಬಿ.ಕೆ. ಸಂಗಮೇಶ್ವರ್ ಮತ್ತು ಅವರ ಕುಟುಂಬದ ವಿರುದ್ಧ ದೂರು ದಾಖಲಿಸಿರುವುದನ್ನು ಖಂಡಿಸಿ ನಾಳೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಪಕ್ಷದ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಘಟನೆ ಮತ್ತು ತದನಂತರ ನಡೆದ ಬೆಳವಣಿಗೆಯ ಕುರಿತು ಐಜಿ, ಎಸ್ಪಿ ಮೊದಲಾದ ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಕರಣವನ್ನು ತಿಳಿಗೊಳಿಸಲು ಮನವಿ ಮಾಡಿಕೊಳ್ಳಲಾಗಿತ್ತು. ಆದರೆ, ಶಾಸಕರ ಪುತ್ರರನ್ನೇ ಬಂಧಿಸಲಾಗಿದ್ದು, ದಿನಕ್ಕೊಬ್ಬರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಹಾಗೂ ೩೦೭ ಪ್ರಕರಣ ದಾಖಲಿಸಿ, ದ್ವೇಷದ ರಾಜಕಾರಣಕ್ಕೆ ಬಿಜೆಪಿ ನಾಂದಿ ಹಾಡುತ್ತಿದೆ ಎಂದರು.
ಈ ಘಟನೆ ಕುರಿತಂತೆ ರಾಜ್ಯದ ಕಾಂಗ್ರೇಸ್ ನಾಯಕರು ಶನಿವಾರ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post