ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕರ್ನಾಟಕ ಜನಶಕ್ತಿ ಅಂಗ ಸಂಸ್ಥೆ “ಮಹಿಳಾ ಮುನ್ನಡೆ” ವತಿಯಿಂದ ಜನ್ನಾಪುರದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮವನ್ನು ನ್ಯೂಟನ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಭಾರತಿ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶ್ವೇತಾ, ಸರ್ಕಾರಿ ಆಸ್ಪತ್ರೆಯ ಅರಿವಳಿಕೆ ತಜ್ಞೆ ಪ್ರೀತಿ, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಿ.ಸಿ ಮಾಯಣ್ಣ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಹಿಳೆಯರ ಹಕ್ಕಿನ ಬಗ್ಗೆ ಮಾತನಾಡಿದರು.
ಮಹಿಳಾ ಮನ್ನಡೆ ಅಧ್ಯಕ್ಷೆ ಎನ್. ನಾಗವೇಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಕೀಲರಾದ ವರಲಕ್ಷ್ಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಪಾರ್ವತಿ ಸ್ವಾಗತಿಸಿ, ರೂಪಾ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post