ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಭದ್ರಾವತಿಯ ವಿಐಎಸ್‌ಎಲ್ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ಹಾಗೂ ಜಿಲ್ಲೆಯ ವಿವಿಧ ಆದ್ಯತಾ ಕ್ಷೇತ್ರಗಳಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸುವ ಮೂಲಕ ಹೆಚ್ಚಿನ ಯುವಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾiನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಅವರು ಇಂದು ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾiನ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಅವರು, ಪ್ರಸ್ತುತ ಭದ್ರಾವತಿಯಲ್ಲಿ ಸ್ಥಗಿತಗೊಂಡಿರುವ ಕಾರ್ಖಾನೆಯು ಹೆಚ್ಚಿನ ಮೌಲ್ಯವುಳ್ಳ ಆತ್ಯಾಧುನಿಕ ತಂತ್ರಜ್ಞಾನಾಧಾರಿತ ಉಕ್ಕನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, ಈ ಕೈಗಾರಿಕೆಯನ್ನು ಲಾಭದಾಯಕವಾಗಿ ನಡೆಸಲು ಇನ್ನಷ್ಟು ಅತ್ಯಾಧುನಿಕವಾದ ಯಂತ್ರೋಪಕರಣಗಳು ಸೇರಿದಂತೆ ವಿವಿಧ ಅವಶ್ಯಕ ಸೌಲಭ್ಯಗಳನ್ನು ಒದಗಿಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಈ ಕೈಗಾರಿಕೆಯಲ್ಲಿನ ಉಕ್ಕು ಉತ್ಪಾದನಾ ಘಟಕಗಳಲ್ಲಿ ಬಂಡವಾಳ ಹೂಡಿಕೆ ಮಾಡಿ, ಹೆಚ್ಚಿನ ಮೌಲ್ಯವುಳ್ಳ ಉಕ್ಕಿನ ಉತ್ಪನ್ನಗಳ ಉತ್ಪಾದನೆಯನ್ನು ಹೆಚ್ಚಿಸುವ ಅವಶ್ಯಕತೆ ಇದೆ. ಮಧ್ಯಮ ಹಾಗೂ ದೀರ್ಘಕಾಲದ ಅವಧಿಯಲ್ಲಿ, ಉಕ್ಕು ಉತ್ಪಾದನೆಯ ಪ್ರಕ್ರಿಯೆಯನ್ನು ಆಧುನಿಕ ವ್ಯವಸ್ಥೆಗೆ ಪೂಕರವಾಗಿ ನವೀಕರಿಸಿ, ಸಿಂಟರ್ ಪ್ಲಾಂಟ್, ಕೋಕ್ ಓವನ್ ಹಾಗೂ ಆಧುನೀಕರಿಸಿದ ಸ್ಟೀಲ್ ಕರಗುವ ಘಟಕದ (ಎಸ್‌ಎಮ್‌ಎಸ್) ಸೌಲಭ್ಯಗಳನ್ನು ನೀಡುವುದರ ಮೂಲಕ ಪ್ರತಿಸ್ಪರ್ಧಿಗಳಲ್ಲಿ ಲಭ್ಯವಿರುವ ಮಟ್ಟಕ್ಕೆ ವಿಐಎಸ್‌ಎಲ್ ಘಟಕವನ್ನು ಕೊಂಡೊಯ್ಯುವ ಅಗತ್ಯವಿದೆ ಎಂದ ಅವರು, ಖಾಸಗೀ ಬಂಡವಾಳಗಾರರನ್ನು ಆಕರ್ಷಿಸಿ ವಿಐಎಸ್‌ಎಲ್ ಅನ್ನು ಪುನರ್ ಆರಂಭ ಮಾಡಲು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಮನವಿ ಮಾಡಿಕೊಂಡಿದ್ದು, ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಅಂತೆಯೇ ಜಿಲ್ಲೆಯಲ್ಲಿ ಎಲ್‌ಇಡಿ ಬಲ್ಬ್, ಟೆಕ್ಸ್‌ಟೈಲ್ ಪಾರ್ಕ್, ಆಹಾರ ಸಂಸ್ಕರಣಾ ಘಟಕಗಳು ಮತ್ತು ಇಎಸ್‌ಡಿಎಂ (Electronics System Design & Manufacturing) ಕೈಗಾರಿಕಾ ಕೇಂದ್ರಗಳ ಮುಖಾಂತರ ಉದ್ಯೋಗ ಅವಕಾಶಗಳನ್ನು ಸೃಷ್ಟಿ ಮಾಡಲೂ ಸಹ ಮನವಿ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post