ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರದ ಎನ್.ಟಿ ರಸ್ತೆಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಮೇರೆಗೆ ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿವಮೊಗ್ಗ ನಿವಾಸಿ ಮಂಜುನಾಥ ಆಲಿಯಾಸ್ ಮಂಜ (30) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ ಮೂರು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಮೊತ್ತ ಒಂದು ಲಕ್ಷ ರೂ. ಮೌಲ್ಯ ಎಂದು ಅಂದಾಜಿಸಲಾಗಿದೆ.
ಪೊಲೀಸ್ ಇನ್ಸ್‌ಪೆಕ್ಟರ್ ವಸಂತ್ ಕುಮಾರ್, ಹಾಗೂ ಪಿಎಸ್‌ಐ ಮಂಜಮ್ಮ ಅವರ ನೇತೃತ್ವದಲ್ಲ್ಲಿ ಸಿಬ್ಬಂದಿಗಳಾದ ಹೆಚ್.ಸಿ. ಲಚ್ಚಾನಾಯ್ಕ್, ಶೇಖರ್, ಸಿಪಿಸಿ ನಿತಿನ್ ಹಾಗೂ ಸುದರ್ಶನ್‌ರವರುಗಳನ್ನೊಳಗೊಂಡ ತಂಡವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿರುತ್ತದೆ ಎಂದು ಪೊಲೀಸ್ ಅಧೀಕ್ಷಕ ಕೆ.ಎಂ ಶಾಂತರಾಜು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post