ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ಮೊದಲನೇ ಡೋಸ್ ಪಡೆದರು.
ಲಸಿಕೆ ಪಡೆದ ನಂತರ ಮಾತನಾಡಿದ ಸಚಿವರು ಎಲ್ಲ ಹಿರಿಯ ನಾಗರೀಕರು, ಅರ್ಹ ವ್ಯಕ್ತಿಗಳು ಆದಷ್ಟು ಬೇಗ ನೋಂದಣಿ ಮಾಡಿಕೊಂಡು ತಪ್ಪದೆ ಲಸಿಕೆ ಪಡೆಯಬೇಕೆಂದು ಕೋರಿದರು.
ಭಾರತ ಮತ್ತು ಕರ್ನಾಟಕವನ್ನು ಕೊರೊನಾ ಮುಕ್ತವಾಗಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.
ಸ್ವತಃ ವೈದ್ಯರಾಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಮುಂಚೂಣಿ ಕಾರ್ಯಕರ್ತರ ಕೋಟಾದಡಿ ಲಸಿಕೆ ಪಡೆದಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post