ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಭದ್ರಾವತಿ ಬಿಜೆಪಿ ಅಧ್ಯಕ್ಷ ಪ್ರಭಾಕರ್ ಅವರ ಮನೆಗೆ ಆಗಮಿಸಿ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರೊಂದಿಗೆ ಮಾತನಾಡಿ, ಗೂಂಡಾಗಿರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ದಿನದಿಂದ ದಿನಕ್ಕೆ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಕೆಟ್ಟ ಸಂಸ್ಕೃತಿಯಿಂದ ಕೂಡಿರುವ ಕಾಂಗ್ರೆಸ್ ನಾಯಕರಿಗೆ ಒಳ್ಳೆಯದು ಯಾವುದೂ ಕಣ್ಣಿಗೆ ಕಾಣುವುದಿಲ್ಲ. ಭದ್ರಾವತಿಯಲ್ಲಿ ಕಾಂಗ್ರೆಸ್ ಶಾಸಕರು ಮತ್ತು ಅವರ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಭದ್ರಾವತಿ ಶಾಸಕರ ನೇತೃತ್ವದಲ್ಲಿ ತುಘಲಕ್ ದರ್ಬಾರ್ ನಡೆದಿದೆ. ಕಾಂಗ್ರೆಸ್ ಪಕ್ಷ ಅದನ್ನು ಬೆಂಬಲಿಸಿ ತನ್ನ ಅಸ್ತಿತ್ವ ಹುಡುಕುತ್ತಿದೆ. ಕಾಂಗ್ರೆಸ್‌ನವರ ಗೂಂಡಾಗಿರಿಗೆ ಇಲ್ಲಿ ಅವಕಾಶ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಶ್ರೀನಾಥ್, ಧರ್ಮಪ್ರಸಾದ್, ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ, ಒಳಚರಂಡಿ ನಿಗಮದ ನಿರ್ದೇಶಕ ರುದ್ರೇಶ್ ಮಂಗೋಟೆ, ಸೂಡಾ ಸದಸ್ಯ ಕದಿರೇಶ್, ರಾಮಲಿಂಗಯ್ಯ, ಹಟ್ಟಿ ಚಿನ್ನದ ಗಣಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್ ಪ್ರಮುಖರಾದ ಆನಂದ ಸೇರಿದಂತೆ ಇನ್ನಿತರ ನಾಯಕರು ಮತ್ತು ಎಲ್ಲಾ ಮೋರ್ಚಾದ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















