ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಸೊರಬ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಖಾಸಗಿ ಕಾರ್ಯ ನಿಮಿತ್ತ ತೆರಳುವ ಮಾರ್ಗ ಮಧ್ಯೆ ಇಲ್ಲಿನ ಐಬಿ (ನಿರೀಕ್ಷಣಾ ಮಂದಿರ) ಯಲ್ಲಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರನ್ನು ಸೌಹಾರ್ದ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತಾನು ಕಾಂಗ್ರೇಸ್ ಮುಖಂಡ ಸಿದ್ಧರಾಮಯ್ಯ ಸಮಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು ನಿಜ ಹಾಗೂ ತಾವು ಪ್ರಸ್ತುತ ಕಾಂಗ್ರೆಸ್ ಸದಸ್ಯ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಭಿಪ್ರಾಯದಂತೆ ಶಿವಮೊಗ್ಗದಲ್ಲಿ ಬೃಹತ್ ಪಕ್ಷ ಸೇರ್ಪಡೆ ಸಮಾವೇಶ ನಡೆಸಲಾಗುವುದು. ಇನ್ನಷ್ಟು ನನ್ನ ಸ್ನೇಹಿತರು, ಅಭಿಮಾನಿಗಳು ಅಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಾಗರ ನಗರ ಸಭೆ ವಿಪಕ್ಷನಾಯಕ ಗಣಪತಿ ಮಂಡಗಳಲೆ, ರವಿಲಿಂಗನಮಕ್ಕಿ, ಸಂತೋಷ್ ಸದ್ಗುರು, ಐ.ಜಿ. ಸ್ವರೂಪ್ ಮೊದಲಾದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post