ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕೆಗಳಲ್ಲೊಂದಾಗಿರುವ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಯತ್ನಿಸಲಾಗಿದ್ದು, ಈ ಸಂಬಂಧ ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾತಾಮನ್ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗಿದ್ದು, ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ಇದೇ ರೀತಿ ಎಂಪಿಎಂ ಕಾರ್ಖಾನೆಯನ್ನು ಖಾಸಗಿ ವ್ಯವಸ್ಥೆಯಲ್ಲಿ ನಡೆಸಲು ಈಗಾಗಲೇ ಟೆಂಡರ್ ಕರೆದಿದ್ದು ಶೀಘ್ರ ಒಂದು ಹಂತಕ್ಕೆ ಬರಲಿದೆ. ಈ ಹಿನ್ನೆಲೆಯಲ್ಲಿ ಇಂದು ಎಂಪಿಎಂ ಹಾಗೂ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಕೈಗಾರಿಕಾ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾ ಆಯುಕ್ತ ಗುಂಜನ್ ಕೃಷ್ಣ ಹಾಗೂ ಪರಿಸರ ಅಧಿಕಾರಿ ಶ್ರೀನಿವಾಸ ಇವರುಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post