ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಭಾರತೀಯ ಸೇನೆ ನಡೆಯಲಿರುವ ಆಯ್ಕೆಯಲ್ಲಿ ಗುರಿ ತಲುಪುವ ಮೂಲಕ ನಗರಕ್ಕೆ ಕೀರ್ತಿ ತರುವ ಜೊತೆಯಲ್ಲಿ ದೇಶ ಸೇವೆ ಮಾಡುವುದರಲ್ಲಿ ನಿಮ್ಮ ದೃಷ್ಠಿ ಕೇಂದ್ರೀಕೃತವಾಗಿರಲಿ ಎಂದು ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಕರೆ ನೀಡಿದರು.
ಭೂಸೇನೆಗೆ ಉಡುಪಿಯಲ್ಲಿ ನಡೆಯಲಿರುವ ನೇಮಕಾತಿಯಲ್ಲಿ ಪಾಲ್ಗೊಳ್ಳಲಿರುವ ಯುವಕರಿಗೆ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಉಚಿತ ದೈಹಿಕ ಹಾಗೂ ಲಿಖಿತ ಪರೀಕ್ಷಾ ತರಬೇತಿ ನೀಡಿದ್ದು, ಈ ಸಂದರ್ಭದಲ್ಲಿ ನಡೆದ ಗುರುವಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಅಭಿಪ್ರಾಯ ಹಂಚಿಕೊಂಡ ತರಬೇತಿ ಪಡೆದ ಯುವಕರು, ಭೂ ಸೇನೆಗೆ ಸೇರಲು ತರಬೇತಿ ಪಡೆಯಲು ದೂರದ ಊರುಗಳಿಗೆ ತೆರಳಬೇಕಾಗುತ್ತದೆ. ಅಲ್ಲದೆ ಸಾಕಷ್ಟು ಹಣ ಖರ್ಚಾಗುತ್ತದೆ. ಇಲ್ಲಿಯೇ ಉಚಿತ ತರಬೇತಿ ನೀಡುತ್ತಿರುವುದರಿಂದ ಹೆಚ್ಚಿನ ಅನುಕೂಲವಾಗಿದೆ. ಅಲ್ಲದೆ ತರಬೇತಿ ಅವಧಿಯಲ್ಲಿ ತರಬೇತಿದಾರರು ಹಾಗು ಆಯೋಜಕರ ಹೆಚ್ಚಿನ ಕಾಳಜಿ ಹಾಗು ಶ್ರಮ ಶ್ಲಾಘನೀಯ ಎಂದರು.
ಮಾಜಿ ಸೈನಿಕರ ಸಂಘದ ವತಿಯಿಂದ ಹಲವು ವರ್ಷಗಳಿಂದ ಉಚಿತ ತರಬೇತಿ ಆಯೋಜಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ಸಹ ನಗರದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ತರಬೇತಿ ನಡೆಯಿತು. ನಗರ ಹಾಗೂ ಗ್ರಾಮಾಂತರ ಭಾಗದ ಸುಮಾರು 42 ಯುವಕರು ಪ್ರತಿದಿನ ಬೆಳಿಗ್ಗೆ ತರಬೇತಿಯಲ್ಲಿ ಪಾಲ್ಗೊಂಡು ಸದುಪಯೋಗ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಅಶೋಕ್, ಕಾರ್ಯದರ್ಶಿ ವೆಂಕಟಗಿರಿ, ಭೋರೇಗೌಡ, ಅಹ್ಮದ್, ಗೋವಿಂದಪ್ಪ, ನಗರಸಭಾ ಸದಸ್ಯ ಕೆ.ಎನ್. ಭೈರಪ್ಪ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post