ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ರೇವಣಸಿದ್ಧ ಮಹಾಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಿಜಾಪುರ ಜಿಲ್ಲೆ ಬಸವನಬಾಗೇವಾಡಿಯಲ್ಲಿ ಜನಿಸಿದ ಸ್ವಾಮೀಜಿ ಅವರು ಬಾಲ್ಯಾವಸ್ಥೆಯಲ್ಲಿಯೇ ಸನ್ಯಾಸ ಸ್ವೀಕರಿಸಿ, ಆಧ್ಯಾತ್ಮಿಕ ಉನ್ನತಿ ಸಾಧಿಸಿದ್ದರು. ಅವರು ತಮ್ಮ ಸಮಾಜಮುಖಿ ಚಿಂತನೆಗಳ ಮೂಲಕ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಎಲ್ಲಾ ಧರ್ಮದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಸ್ವಾಮೀಜಿ ಅವರ ನಿಧನದಿಂದ ನಾವು ಹಿರಿಯ ಆಧ್ಯಾತ್ಮಿಕ ಚೇತನವನ್ನು ಕಳೆದುಕೊಂಡಿದ್ದೇವೆ ಎಂದಿದ್ದಾರೆ.
ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಎಂದು ಅವರು ತಮ್ಮ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post