ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಹೊಸ ರೂಪ ಕೊಡಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು ಎಂದು ತಿಳಿದಿಬಂದಿದೆ.
ಆಂಜನೇಯ ಜನಿಸಿರುವ ಅಂಜನಾದ್ರಿ ಬೆಟ್ಟಕ್ಕೆ ಮೂಲಭೂತ ಸೌಕರ್ಯ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಈ ಕುರಿತು ಏಪ್ರಿಲ್ 16ರಂದು ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಸೇರಿದಂತೆ 5 ಜನ ಸಚಿವರಿಂದ ಅಂಜನಾದ್ರಿ ಬೆಟ್ಟ ಸ್ಥಳ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.
ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಸಿ.ಪಿ. ಯೋಗೇಶ್ವರ, ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಶ್ರೀನಿವಾಸ ಪೂಜಾರಿ, ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ಪಾಟೀಲ್, ಗಂಗಾವತಿ ಶಾಸಕ ದೊಡ್ಡನಗೌಡ ಸೇರಿದಂತೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಮಹೇಂದ್ರಜೈನ್, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೇ, ಜಂಗಲ್ ಲಾಡ್ಜಸ್ ವ್ಯವಸ್ಥಾಪಕ ನಿರ್ದೇಶಕಕುಮಾರ್ ಪುಷ್ಕರ್, ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post