ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಒಟ್ಟು 9 ವಾರೆಂಟ್ ಆರೋಪಿಗಳನ್ನು ಪೊಲೀಸರು ಬಂಧಿsಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಗಳ ಪತ್ತೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿ.ಐ ವಸಂತ್ ಕುಮಾರ್ ಅವರು ಠಾಣಾ ಸಿಬ್ಬಂದಿಗಳಾದ ಹೆಚ್.ಸಿ ಮೋಹನ್. ಕೆ, ಮಂಜಪ್ಪ ಎಂ.ಹೆಚ್ ಮತ್ತು ಪಿಸಿ ಸ್ವಾಮಿ ಹಾಗೂ ಮಹದೇವ್ ಅವರ ತಂಡ ರಚಿಸಿದ್ದರು. ಈ ತಂಡ ಮೂರು ದಿನಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದ 9 ಜನ ಆರೋಪಿಗಳನ್ನು ಬಂಧಿಸಿದೆ ಎನ್ನಲಾಗಿದೆ.
ಆರೋಪಿಗಳ ಪೈಕಿ ಓರ್ವ 5 ವರ್ಷಗಳಿಂದ, ಇಬ್ಬರು ಆರೋಪಿಗಳು 2 ವರ್ಷಗಳಿಂದ ಹಾಗೂ 6 ಮಂದಿ 1 ವರ್ಷದಿಂದ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದರು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಎಸ್‌ಪಿ ಕೆ.ಎಂ. ಶಾಂತರಾಜು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post