ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿರುವ ಘಟನೆ ನಗರದ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಶ್ರಯ ಬಡಾವಣೆ ರಸ್ತೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸುನಿಲ್ (26), ಇಮ್ರಾನ್ ಆಲಿಯಾಸ್ ಬೆಟ್ಟಿ ಇಮ್ರಾನ್ (22), ದಾದಾಪೀರ್ (22), ರಿಜ್ವಾನ್ (23) ಆರೋಪಿಗಳಾಗಿದ್ದು, ಬಂಧಿತರಿಂದ 600ರೂ. ನಗದು ಮತ್ತು 400ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಉಪವಿಭಾಗ ಡಿವೈಎಸ್‌ಪಿ ಶಿವಾನಂದ ಮದರಕಂಡಿ, ಹಾಗೂ ಸಿಪಿಐ ಗುರುರಾಜ್ ಎನ್ ಮೈಲಾರ್ ಮಾರ್ಗದರ್ಶನದಲ್ಲಿ ಪಿಎಸ್‌ಐ ರಾಜುರೆಡ್ಡಿ ಬೆನ್ನೂರ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್.ಸಿ ಸಂತೋಷ್, ಧನುವಿನಮನಿ, ಪ್ರಸನ್ನ ನಾಯಕ, ಮಲ್ಲೇಶಪ್ಪ, ಶಿವಾನಂದ್ ಗಾಮದ್ ಹಾಗೂ ಸಿಪಿಸಿ ಪ್ರಶಾಂತ್ ಅವರ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ಆರೋಪಿಗಳ ವಿರುದ್ದ ಎನ್‌ಡಿಪಿಎಸ್ ಕಾಯ್ದೆ ರೀತ್ಯ ಪ್ರಕರಣವನ್ನು ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಮಾದಕ ವಸ್ತು ಗಾಂಜಾ ಮಾರಾಟದ ಬಗ್ಗೆ ಸಾರ್ವಜನಿಕರು ಶಿವಮೊಗ್ಗ ಜಿಲ್ಲಾ ಪೊಲೀಸ್ ದೂರವಾಣಿ ಸಂಖ್ಯೆ ಮೊ: 9480803301 ಗೆ ಕರೆ ಮಾಡಿ ಮಾಹಿತಿಯನ್ನು ನೀಡಬಹುದು. ಮಾಹಿತಿಯನ್ನು ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸ್ ಅಧೀಕ್ಷಕ ಕೆ.ಎಂ ಶಾಂತರಾಜು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















