ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚನ್ನಪಟ್ಟಣ: ಚಿಕ್ಕ ವಯಸ್ಸಿನಲ್ಲಿಯೇ ನಿಸ್ವಾರ್ಥ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ತಾಲೂಕಿನಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಇಲ್ಲಿನ ನವ್ಯ ಫೌಂಡೇಷನ್ ಅಧ್ಯಕ್ಷೆ ಆರ್. ನವ್ಯಶ್ರಿ ಅವರಿಗೆ ಬೆಂಗಳೂರಿನ ಪ್ರತಿಷ್ಠಿತ ಎಕ್ಷೈಡ್ ಗ್ರೂಪ್ ಸೂಪರ್ ವುಮನ್-2021 ಪ್ರಶಸ್ತಿ ನೀಡಿ ಗೌರವಿಸಿದೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸಮಾಜ ಸೇವೆ ಕ್ಷೇತ್ರದಲ್ಲಿ ಆರ್. ನವ್ಯಶ್ರೀ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಸ್ಥೆಯ ಪ್ರಾದೇಶಿಕ ಮುಖ್ಯಸ್ಥ ಬಿ.ಕೆ. ಹರ್ಷವರ್ಧನ್, ವಿಭಾಗೀಯ ಅಧಿಕಾರಿ ಶಂಭುಲಿಂಗೇಶ್ವರ, ಎಕ್ಸೈಡ್ ಗ್ರೂಪ್ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post