ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗ್ವಾಲಿಯರ್: ಆಟೋರಿಕ್ಷಾ ಬಸ್ಗೆ ಡಿಕ್ಕಿ ಹೊಡೆ ಪರಿಣಾಮ 13 ಜನ ಮೃತಪಟ್ಟ ಘಟನೆ ಇಲ್ಲಿನ ಹಳೆಯ ಪುರಾಣಿ ಚವಾನಿ ಪ್ರದೇಶದಲ್ಲಿ ನಡೆದಿದೆ.

ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಆಟೋರಿಕ್ಷಾ ವೇಗವಾಗಿ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದ್ದು, 12 ಮಂದಿ ಮಹಿಳೆಯರು ಮತ್ತು ಓರ್ವ ಪುರುಷ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮಹಿಳೆಯರು ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಮಾಡಿಟ್ಟು ತಮ್ಮ ಮನೆಗೆ ಹಿಂತಿರುಗುತ್ತಿದ್ದರು ಎಂದು ಗ್ವಾಲಿಯರ್ ಎಸ್ ಪಿ ಅಮಿತ್ ಸಂಘಿ ತಿಳಿಸಿದ್ದಾರೆ.
ಪ್ರಯಾಣಿಕರಲ್ಲಿ 8 ಮಂದಿ ಮಹಿಳೆಯರು ಮತ್ತು ಚಾಲಕ ಸ್ಥಳದಲ್ಲಿಯೇ ಮೃತಪಟ್ಟರೆ ಉಳಿದವರು ಆಸ್ಪತ್ರೆಗೆ ದಾಖಲಿಸಿದ ನಂತರ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















