ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರದ ಅಕ್ಷಯ ಪಂಡಿತ್ ಅವರ ಬಯಲಲಿ ತೇಲುತ ತಾನು ಅಪ್ರಕಟಿತ ಕಥಾ ಸಂಕಲನಕ್ಕೆ 2021ರ ಈ ಹೊತ್ತಿಗೆ ಕಥಾಪ್ರಶಸ್ತಿ ಲಭಿಸಿದೆ.
ಪ್ರಶಸ್ತಿ 10 ಸಾವಿರ ರೂ. ನಗದು ಹಾಗೂ ಫಲಕ ಒಳಗೊಂಡಿದೆ. ಅಕ್ಷಯ್ ಅವರು ಬೆಂಗಳೂರಿನ ಸಾಫ್ಟ್’ವೇರ್ ಕಂಪೆನಿಯೊಂದರಲ್ಲಿ ಪ್ರಾಡಕ್ಟ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಬೆಂಗಳೂರಿನ ಜೆಪಿ ನಗರದಲ್ಲಿರುವ ಕಪ್ಪಣ್ಣ ಅಂಗಳ ಸಭಾಂಗಣದಲ್ಲಿ ಮೇ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post