ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೊರಬ: ಆಟೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಅಗಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಗಸನಹಳ್ಳಿ ಗ್ರಾಮದ ಕೋಟೋಶ (42) ಮೃತ ಆಟೋ ಚಾಲಕ. ಆನವಟ್ಟಿಯಿಂದ ತೆರಳುತ್ತಿದ್ದ ಆಟೋಗೆ ಹಾನಗಲ್ಲ ಮಾರ್ಗವಾಗಿ ಆನವಟ್ಟಿಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತ ಪಟ್ಟಿದ್ದಾನೆ.
ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















