ಕಲ್ಪ ಮೀಡಿಯಾ ಹೌಸ್
ಹೊಸನಗರ: ತಾಲೂಕಿನ ಬಟ್ಟೆಮಲ್ಲಪ್ಪ ಬಸವಬ್ಯಾಣದ ಅಯ್ಯಪ್ಪ ಮೆಮೋರಿಯಲ್ ಟ್ರಸ್ಟ್, ವ್ಯಾಸ ಮಹರ್ಷಿ ಹಾಗೂ ಪ್ರಸಾದ್ ನೇತ್ರಾಲಯ ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಅಂದತ್ವ ನಿವಾರಣಾ ವಿಭಾಗ ಮತ್ತು ಹರಿದ್ರಾವತಿ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಕಾರದೊಂದಿಗೆ ಮಾರ್ಚ್ 25ರ ನಾಳೆ 7ನೇ ವರ್ಷದ ಉಚಿತ ನೇತ್ರ ತಪಾಸಣೆ, ನೇತ್ರ ಶಸ್ತ್ರ ಚಿಕಿತ್ಸೆ ಮತ್ತು ಮಸೂರ ಅಳವಡಿಕೆ ಶಿಬಿರ ಏರ್ಪಡಿಸಲಾಗಿದೆ.
ಬೆಳಿಗ್ಗೆ 9ರಿಂದ 1ಗಂಟೆ ವರೆಗೆ ಹರಿದ್ರಾವತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೇತ್ರ ತಪಾಸಣಾ ಶಿಬಿರ ನಡೆಯಲಿದೆ. ತಪಾಸಣೆಗೆ ಬರುವಾಗ ಆಧಾರ್, ಓಟರ್ ಐಡಿ, ರೇಷನ್ ಕಾರ್ಡ್ ಜೆರಾಕ್ಸ್ ಮರೆಯದೇ ತರಬೇಕು ಎಂದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9483439666ಗೆ ಸಂಪರ್ಕಿಸಬಹುದು. ಯಾವುದೇ ಶುಲ್ಕ ಇರುವುದಿಲ್ಲ. ಸಾರಿಗೆ ಸೇರಿದಂತೆ ಎಲ್ಲವೂ ಉಚಿತವಾಗಿರುತ್ತದೆ ಎಂದು ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post