ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀರಾಮನ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ವಿರುದ್ಧ ಶುಕ್ರವಾರ ಸಂಜೆ ಬಜರಂಗದಳ ಕಾರ್ಯಕರ್ತರು ನಗರದ ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಸಿ.ಎಂ ಇಬ್ರಾಹಿಂ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಕಾರ್ಯಕರ್ತರು, ಪ್ರಭು ಶ್ರೀರಾಮ ಕುರಿತ ಅವಹೇಳನಕಾರಿ ಹೇಳಿಕೆಯಿಂದಾಗಿ ಹಿಂದೂಗಳ ಭಾವನೆಗೆ ಧಕ್ಕೆಯುಂಟಾಗಿದೆ. ತಕ್ಷಣ ಹಿಂದೂಗಳ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಯಾವುದೇ ಕಾರಣಕ್ಕೂ ಕ್ಷೇತ್ರಕ್ಕೆ ಆಗಮಿಸಲು ಬಿಡುವುದಿಲ್ಲ. ಒಂದು ವೇಳೆ ಆಗಮಿಸಿದ್ದಲ್ಲಿ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಬಜರಂಗದಳ ಜಿಲ್ಲಾ ಸಹ ಸಂಚಾಲಕ ವಡಿವೇಲು, ಸುನಿಲ್‌ಕುಮಾರ್, ದೇವರಾಜ್, ಚಂದ್ರು, ಕಿರಣ್, ಕೃಷ್ಣ, ಸವಾಯಿ ಸಿಂಗ್, ಶ್ರೀಕಾಂತ್, ಸಂಜು, ರಮೇಶ್, ಮಣಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post