ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕೊರೋನಾ 2ನೆಯ ಅಲೆಯ ಭೀತಿಯ ಹಿನ್ನೆಲೆಯಲ್ಲಿ ನಿಯಮಾವಳಿಗಳನ್ನು ರಾಜ್ಯ ಸರ್ಕಾರ ಕಠಿಣಗೊಳಿಸಿರುವ ಬೆನ್ನಲ್ಲೇ ನಗರದಲ್ಲೂ ಸಹ ಮಾಸ್ಕ್ ಧರಿಸದವರ ವಿರುದ್ಧ ದಂಡ ವಿಧಿಸಲಾಗುತ್ತಿದೆ.
ಜಿಲ್ಲಾ ರಕ್ಷಣಾಧಿಕಾರಿಗಳು ಪ್ರಕಟಿಸಿರುವ ಮಾಹಿತಿಯಂತೆ ಮಾರ್ಚ್ ತಿಂಗಳು ಒಂದರಲ್ಲೇ ನಗರದಲ್ಲಿ ಮಾಸ್ಕ್ ಧರಿಸದವರ ವಿರುದ್ಧ ಒಟ್ಟು 827 ಪ್ರಕರಣಗಳನ್ನು ದಾಖಲಿಸಲಾಗಿದೆ. ಒಟ್ಟು 82,700 ರೂ. ದಂಡವನ್ನು ವಸೂಲಿ ಮಾಡಲಾಗಿದ್ದು, ಮಾಸ್ಕ್ ಧರಿಸುವಂತೆ ಜಾಗೃತಿಯನ್ನೂ ಸಹ ಮೂಡಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















