ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ನಗರದ ಸಾರಿಗೆ ನೌಕರರು ಇಂದು ಕಪ್ಪುಪಟ್ಟಿ ಧರಿಸಿ ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಟಿ, ಕಾಫಿ, ಬೋಂಡ, ತಿಂಡಿ ಮಾರಾಟ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ನೌಕರರ ರಾಜ್ಯ ಸಮಿತಿ ಸಂಘಟನಾ ಕಾರ್ಯದರ್ಶಿ ಬಾಬುರಾಜು ಮಾತನಾಡಿ, ಸರ್ಕಾರ ಆರನೇ ವೇತನವನ್ನು ಯತಾವತ್ತಾಗಿ ಜಾರಿಗೊಳಿಸಬೇಕು. ನೌಕರರ ಕಷ್ಟವನ್ನು ರಾಜ್ಯ ಸರ್ಕಾರ ಅರ್ಥಮಾಡಿಕೊಳ್ಳಬೇಕು. ದಿನಬಳಕೆ ಪದಾರ್ಥಗಳ ಬೆಲೆ ದುಬಾರಿಯಾಗಿದ್ದು, ಸರ್ಕಾರ ನೀಡುತ್ತಿರುವ ಅತ್ಯಂತ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆಗೆ ಸಾಕಾಗುತ್ತಿಲ್ಲ. ಜೀವನ ನಡೆಸುವುದೆ ಕಷ್ಟವಾಗಿದ್ದು, ನೌಕರರ ಬಿದಿಗೆ ಬಿಳುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸಮಿತಿಯ ಸಂಗಪ್ಪ ಚೌದರಿ ಮಾತನಾಡಿ, 6ನೆಯ ವೇತನ ಜಾರಿಗೊಳಿಸಲು ಸರ್ಕಾರ ನೀಡಿದ್ದ ಗಡುವು ಮುಗಿದಿದೆ. ನೌಕರರ ಸಂಕಷ್ಟ ಯಾರಿಗೂ ಅರ್ಥವಾಗುತ್ತಿಲ್ಲ. ನಮ್ಮನ್ನು ಸರ್ಕಾರಿ ನೌಕರರೆಂದು ಘೋಷಿಸಿ ಎಂದು ಹೋರಾಡುತ್ತಲೇ ಬಂದಿದ್ದೇವೆ. ಆದರೂ ನಮ್ಮ ಕೋರಿಕೆಗೆ ಸ್ಪಂದಿಸಿಲ್ಲ್ಲ. ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
ರೈತ ಸಂಘದ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ, 6ನೆಯ ವೇತನ ಜಾರಿಗೊಳಿಸುವುದರ ಮೂಲಕ ನೌಕರರ ಎಲ್ಲಾ ಬೇಡಿಕೆಯನ್ನು ಕೂಡಲೇ ಈಡೇರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು.
ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀಕಂಠಮೂರ್ತಿ, ಶಶಿಕುಮಾರ್, ಬುಡ್ನಹಟ್ಟಿ ವಿಶ್ವನಾಥ್, ತಿಪ್ಪೇಸ್ವಾಮಿ, ನಿರ್ವಾಹಕ ವೀರಭದ್ರಪ್ಪ ಮಾತನಾಡಿದರು.
ಸಾರಿಗೆ ಸಿಬ್ಬಂದಿಗಳಾದ ತಿಪ್ಪೇಸ್ವಾಮಿ, ಗೋವಿಂದ ಯಾದವ್, ಪರಶುರಾಮ, ನಾಗವೇಣಿ, ಪ್ರದೀಪ, ಶಾಂತವೀರಯ್ಯ, ಜಯಶೀಲ ಇನ್ನಿತರರು ಇದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post