ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಸಿದ್ದರಾಮಯ್ಯ ಅವರಿಗೆ ತಲೆಕೆಟ್ಟಿದ್ದು, ಅವರು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಚಿವ ಈಶ್ವರಪ್ಪ ಆಗ್ರಹಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದೆ ಈಶ್ವರಪ್ಪ ರಾಜೀನಾಮೆ ನೀಡಬೇಕು ಹಾಗೂ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಸಿದ್ಧರಾಮಯ್ಯ ಅವರಿಗೆ ಹುಚ್ಚು ಹಿಡಿದಂತೆ ಆಗಿದೆ. ಅವರ ಮಾತುಗಳನ್ನು ಅಧಿಕಾರಿಗಳು ಕೇಳುತ್ತಿಲ್ಲ ಎಂಬ ನಿರಾಸೆಯಿಂದ ಹೀಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಅಧಿಕಾರಿಗಳು ಈಶ್ವರಪ್ಪನವರ ಮಾತು ಕೇಳುತ್ತಿಲ್ಲವೆಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಸಿದ್ಧರಾಮಯ್ಯನವರು ತಮ್ಮ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಅಭಿವೃದ್ಧಿಯ ಕುರಿತು ಮಾಹಿತಿ ಪಡೆಯಲಿ. ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಆಗಿರುವ ಕೆಲಸಗಳ ಪಟ್ಟಿ ನೋಡಿ ಸಹಿಸಲಾಗದೆ ಈ ರೀತಿಯ ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ. ನಿಮ್ಮ ಪಕ್ಷದವರೇ ನಿಮ್ಮ ಮಾತು ಕೇಳದ ಪರಿಸ್ಥಿತಿ ಇದೆ. ಇನ್ನು ನನ್ನ ಬಗ್ಗೆ ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಸಿದ್ಧರಾಮಯ್ಯನವರು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಈಶ್ವರಪ್ಪ ಆಗ್ರಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post