ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ದಶಕಗಳ ಬೇಡಿಕೆಯಾಗಿದ್ದ ಖಾಸಗಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎ.8ರಿಂದ ನಗರಸಭೆ ಚುನಾವಣೆಯ ನೀತಿಸಂಹಿತೆ ಜಾರಿಗೆ ಬರಲಿದೆ. ಮಳೆಗಾಲ ಆರಂಭಕ್ಕೂ ಮುನ್ನ ನಿಲ್ದಾಣ ಕಾಮಗಾರಿ ಮುಕ್ತಾಯವಾಗಬೇಕು ಎಂಬುದು ನಮ್ಮ ಉದ್ದೇಶ. ಹೀಗಾಗಿ, ಕಾಮಗಾರಿಗೆ ತೊಂದರೆಯಾಗಬಾರದು ಎಂದು ಕಾರಣಕ್ಕಾಗಿ ತರಾತುರಿಯಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಇನ್ನು, ಕೆಎಸ್‌ಆರ್‌ಟಿಸಿ ಬಸ್ ಘಟಕದಲ್ಲಿ ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮುಖ್ಯ ಬಸ್ ನಿಲ್ದಾಣ ನಿರ್ಮಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಹ ಸಲ್ಲಿಸಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post