ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ನೌಕರರು ಸರ್ಕಾರದ ಮುಂದಿಟ್ಟಿದ ಬೇಡಿಕೆಗಳು ಜಾರಿಯಾಗದ ಹಿನ್ನೆಲೆ ಹಾಗೂ ಆರನೆಯ ವೇತನ ಆಯೋಗದ ಪ್ರಕಾರ ವೇತನ ಹೆಚ್ಚಿಸುವಂತೆ ಒತ್ತಾಯಿಸಿ ನಾಳೆಯಿಂದ ಅನಿರ್ದಿಷ್ಟಾವಧಿಗೆ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳ ಓಡಾಟ ಅನಿರ್ದಿಷ್ಟಾವಧಿಗೆ ಸ್ತಬ್ಧವಾಗಿರಲಿದ್ದು, ಇಂದು ರಾತ್ರಿಯಿಂದಲೇ ಮುಷ್ಕರ ಆರಂಭ ಆಗುವ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ತಬ್ಧ ಆಗುವ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ.

ಖಾಸಗಿ ಬಸ್ ಓಡಾಟಕ್ಕೆ ಅನುಮತಿ:
ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರಿ ರೂಟ್‌ನಲ್ಲಿ ಖಾಸಗಿ ಬಸ್‌ಗಳ ಓಡಾಟಕ್ಕೆ ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸಾರಿಗೆ ಸಿಬ್ಬಂದಿ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರಿ ರೂಟ್‌ಗಳಲ್ಲಿ ಖಾಸಗಿ ಬಸ್, ಮಿನಿಬಸ್, ಟ್ಯಾಕ್ಸಿ, ಕ್ಯಾಬ್‌ಗಳನ್ನು ಓಡಿಸಲು ಸರ್ಕಾರ ಅನುಮತಿ ನೀಡಿದೆ. ಈ ಸಂಬಂಧ ಖಾಸಗಿ ವಾಹನಗಳ ಮಾಲೀಕರ ಸಂಘಟನೆಯೊಂದಿಗೆ ಈಗಾಗಲೇ ಸಾರಿಗೆ ಆಯುಕ್ತರು ಸಭೆ ನಡೆಸಿದ್ದಾರೆ ಎನ್ನಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post