ಕಲ್ಪ ಮೀಡಿಯಾ ಹೌಸ್
ನವದೆಹಲಿ: ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ. ರಮಣ ಅವರನ್ನು ಆಯ್ಕೆ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಆದೇಶಿಸಿದ್ದಾರೆ.
ಇದೇ ಏಪ್ರಿಲ್ 23ರಂದು ಹಾಲಿ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೋಬ್ಡೆ ಅವರು ನಿವೃತ್ತಿಯಾಗುತ್ತಿದ್ದು, ಅವರ ಶಿಫಾರಸ್ಸಿನಂತೆ ಏಪ್ರಿಲ್ 24ರಿಂದ ರಮಣ ಅವರು ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಹಾಲಿ ಮುಖ್ಯ ನ್ಯಾಯಮೂರ್ತಿಗಳು ನಿವೃತ್ತರಾಗುವ ಮುನ್ನ ಉತ್ತರಾಧಿಕಾರಿ ಹೆಸರನ್ನು ಸೂಚಿಸುವುದು ಸಂಪ್ರದಾಯ. ಹಾಗೆಯೇ, ಹಾಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಪೈಕಿ ಅತಿ ಹೆಚ್ಚು ಸೇವಾ ಹಿರಿತನ ಹೊಂದಿರುವವರನ್ನು ಸಿಜೆಐ ಆಗಿ ನೇಮಕ ಮಾಡುವುದೂ ಕೂಡ ನಡೆದುಕೊಂಡು ಬಂದಿದೆ. ಸಿಜೆಐ ಶರದ್ ಅರವಿಂದ್ ಬೋಬ್ಡೆ ಬಳಿಕ ನ್ಯಾ. ಎನ್ ವಿ ರಮಣ ಅವರೇ ಸುಪ್ರೀಂ ಕೋರ್ಟ್‌ನಲ್ಲಿ ಅತಿ ಹಿರಿಯ ನ್ಯಾಯಮೂರ್ತಿ ಎನಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















