ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಿ ಸಾರಿಗೆ ನೌಕರರ ಮುಷ್ಕರ ಮುಂದುವರಿದಿದ್ದು, ಬಸ್ ನಿಲ್ದಾಣದಲ್ಲಿಯೇ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಗರದ ಮೆಜೆಸ್ಟಿಕ ಬಸ್ ನಿಲ್ದಾಣದಲ್ಲಿ ನಡೆದಿದೆ.
ಆನೇಕಲ್‌ನ ಚಿಕ್ಕನಹಳ್ಳಿ ನಿವಾಸಿ ಚಿನ್ನಪ್ಪ ಮೃತ ವ್ಯಕ್ತಿಯಾಗಿದ್ದು, ಇವರು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರ ದೇಹವನ್ನು ಆಂಬುಲೆನ್ಸ್ ಮೂಲಕ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















