ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಬುಧವಾರ ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ಹಾಕಿಸಿಕೊಂಡರು.
ನಟ ಪುನೀತ್ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಈ ವಿಚಾರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನನ್ನ ಮೊದಲ ಡೋಸ್ ವ್ಯಾಕ್ಸಿನೇಷನ್ ಇಂದು ಪಡೆದುಕೊಂಡಿದ್ದೇನೆ. ನೀವು 45 ವರ್ಷ ಹಾಗೂ ಮೇಲ್ಪಟ್ಟವರಾದರೆ ವ್ಯಾಕ್ಸಿನ್ ತೆಗೆದುಕೊಳ್ಳುದು ಮರೆಯಬೇಡಿ ಎಂದು ಬರೆದುಕೊಂಡು ಲಸಿಕೆ ಪಡೆದಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.
ನಟ ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿ ಸಮೇತವಾಗಿ ಆಸ್ಪತ್ರೆಗೆ ಕೊರೊನಾ ವ್ಯಾಕ್ಸಿನ್ ಪಡೆದಿದ್ದಾರೆ. ಲಸಿಕೆ ಹಾಕಿಸಿಕೊಳ್ಳುವಂತೆ ಹೇಳಿ ಕಳಕಳಿ ಮೂಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post