ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ಭಾರತೀಯ ಜನತಾ ಪಾರ್ಟಿ ಭಾರತದ ಒಂದು ಪ್ರಮುಖ ರಾಜಕೀಯ ಪಕ್ಷ. 1980ರಲ್ಲಿ ಸ್ಥಾಪಿಸಲ್ಪಟ್ಟ ಈ ಪಕ್ಷವನ್ನು ಸಾಮಾನ್ಯವಾಗಿ ಹಿಂದೂ ರಾಷ್ಟ್ರೀಯವಾದಿ ಬಲಪಂಥೀಯ ಪಕ್ಷ ಎಂದು ಪರಿಗಣಿಸಲಾಗುತ್ತದೆ. 1998-2004 ಅವಧಿಯಲ್ಲಿ ಮಿತ್ರ ಪಕ್ಷಗಳ ಸಹಾಯದೊಂದಿಗೆ ಕೇಂದ್ರ ಸರ್ಕಾರ ರಚಿಸಿ ದೇಶದ ಆಡಳಿತ ನೆಡಸಿತ್ತು. ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್. ಕೆ. ಅಡ್ವಾಣಿ ಮುಖ್ಯ ನಾಯಕತ್ವ ವಹಿಸಿದ್ದರು ಎಂದು ಬಿಜೆಪಿ ಮುಖಂಡ ಎಂ.ಎಸ್. ಜಯರಾಂ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲ್ಲೂಕಿನ ನನ್ನಿವಾಳ, ವರವಿನವರಹಟ್ಟಿ ಗ್ರಾಮ ಹಾಗೂ ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಮಂತ್ರಿ ದಿವಂಗತ ವಾಜಪೇಯಿ, ಎಲ್.ಕೆ.ಅಡ್ವಾಣಿಯವರು ಪಕ್ಷವನ್ನು ಸ್ಥಾಪಿಸಿ 41. ವರ್ಷ ಕಳೆದಿದೆ. ಈ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರು ಉನ್ನತ ಹುದ್ದೆಗೇರಲು ಅವಕಾಶವಿದೆ ಎಂದು ಹೇಳಿದರು.
ಬಿಜೆಪಿ ಪಕ್ಷದ ತತ್ವ-ಸಿದ್ಧಾಂತಗಳು ಇತರೆ ರಾಜಕೀಯ ಪಕ್ಷಗಳಿಗೆ ಮಾದರಿಯಾಗಿವೆ. ಇತಂಹ ಪಕ್ಷವನ್ನು ಸ್ಥಾಪಿಸಿದವರಲ್ಲೊಬ್ಬರಾದ ಅಟಲ್ ಬಿಹಾರಿವಾಜಪೇಯಿ ಅವರು ರಾಷ್ಟ್ರ ರಾಜಕೀಯ ರಂಗದಲ್ಲಿ ಅಜಾತಶತ್ರು, ಚಾಣಾಕ್ಷ ರಾಜಕಾರಣಿ ಎಂದೇ ಪ್ರಖ್ಯಾತರಾದವರು. ಭಾರತ ಕಂಡ ಅಪರೂಪದ ಮಹಾ ರಾಜಕೀಯ ನಾಯಕರಲ್ಲಿ ಒಬ್ಬರು. ತಮ್ಮ ಅಸಾಮಾನ್ಯ ವಾಕ್ ಚಾತುರ್ಯ ಮತ್ತು ಮುತ್ಸದ್ಧಿ ತನದಿಂದ ತಮ್ಮ ಅಧಿಕಾರಾವಧಿಯಲ್ಲಿ ಕೈಗೊಂಡ ದಿಟ್ಟ ಮತ್ತು ದೂರದೃಷ್ಟಿಯ ಕ್ರಮಗಳಿಂದ ಎಲ್ಲರ ಪ್ರಶಂಸೆಗೆ ಪಾತ್ರರಾದರು. ಕಾಂಗ್ರೆಸ್ಸೇತರ ಪ್ರಧಾನಮಂತ್ರಿಯಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ಅವರು, ಬಿಜೆಪಿಯ ಸೌಮ್ಯವಾದಿ ಧುರೀಣರೆಂದು ಗುರುತಿಸಿಕೊಂಡರು. ಜೊತೆಗೆ ಸಾರಿಗೆ ವ್ಯವಸ್ಥೆ ಮಾಡಲು ಉತ್ತಮವಾದ ಹೆದ್ದಾರಿಗಳ ನಿರ್ಮಾಣಕ್ಕೆ ಕಾರಣಕರ್ತರಾಗಿದ್ದರು ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಲುವೆಹಳ್ಳಿ ಜಯಪಾಲಯ್ಯ, ಜಿಲ್ಲಾ ಉಪಾಧ್ಯಕ್ಷ ರಾಮದಾಸ್, ತಾಲ್ಲೂಕು ಘಟಕದ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಮಾತನಾಡಿದರು.
ಜಿಲ್ಲಾ ಹಿರಿಯ ಉಪಾಧ್ಯಕ್ಷ ಬಿ.ಎಸ್.ಶಿವಪುತ್ರಪ್ಪ, ರೈತ ಮೋರ್ಚಾ ಅಧ್ಯಕ್ಷ ನವೀನ್, ಮೋಹನ್, ದಿನೇಶ್‌ರೆಡ್ಡಿ, ಪುರಸಭೆ ಮಾಜಿ ಸದಸ್ಯ ಕೆ.ಶಿವಮೂರ್ತಿ, ತಿಮ್ಮರಾಜ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post