ಭದ್ರಾವತಿ: ಜೆಡಿಎಸ್ ರಾಜ್ಯ ಅಲ್ಪ ಸಂಖ್ಯಾತರ ಕ್ರೈಸ್ತ ಘಟಕದ ಪ್ರಧಾನ ಕಾರ್ಯದರ್ಶಿ ಅಂತೋಣಿ ವಿಲ್ಸನ್ ಅವರು ಪಕ್ಷದ ಪದಾಧಿಕಾರಿ ಸ್ಥಾನಕ್ಕೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಕುರಿತಂತೆ ಜೆಡಿಎಸ್ ರಾಜ್ಯ ಅಲ್ಪ ಸಂಖ್ಯಾತ ಕ್ರೈಸ್ತ ಘಟಕದ ರಾಜ್ಯ ಅಧ್ಯಕ್ಷ ವಿಲ್ಸನ್ ರೆಡ್ಡಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಅವರು, ತತಕ್ಷಣವೇ ರಾಜೀನಾಮೆಯನ್ನು ಅಂಗೀಕರಿಸುವಂತೆ ಕೋರಿದ್ದಾರೆ.
ಕಳೆದ 30 ವರ್ಷಗಳಿಂದಲೂ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ನನ್ನ ವಿದ್ಯಾರ್ಥಿ ದೆಸೆಯಿಂದಲೂ, ವಿದ್ಯಾರ್ಥಿ ಜನತಾದಳದಲ್ಲಿ ರಾಜ್ಯಮಟ್ಟದ ಪದಾಧಿಕಾರಿಯಾಗಿ ಪಕ್ಷಕ್ಕೆ ಸೇವೆ ಸಲ್ಲಿಸಿದ್ದೇನೆ. ನಮ್ಮ ಮಾರ್ಗದರ್ಶಕರಾಗಿದ್ದ ಎಂ.ಜೆ. ಅಪ್ಪಾಜಿಯವರ ಅಕಾಲಿಕ ಮರಣದ ನಂತರ ಸ್ಥಳೀಯವಾಗಿ ನಿಷ್ಠಾವಂತ ಕಾರ್ಯಕರ್ತರನ್ನು ಹಾಗೂ ಅಲ್ಪ ಸಂಖ್ಯಾತರನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಇದರಿಂದ ಬೇಸರಗೊಂಡು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.








Discussion about this post