ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕಾರ್ಯನಿಮಿತ್ತ ಮಂಗಳೂರಿನಲ್ಲಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ವೆನಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮ್ಮ ಉಸ್ತುವಾರಿ ಜಿಲ್ಲೆ ಶಿವಮೊಗ್ಗದ ವ್ಯಕ್ತಿಯೋರ್ವರನ್ನು ಭೇಟಿಯಾಗಿ ಸಾಂತ್ವಾನ ಹೇಳಿದರು.
ನಗರದ ವಾರ್ಡ್ ನಂಬರ್ 1ರ ನಿವಾಸಿಯಾಗಿರುವ ಭಾಗ್ಯ ಅವರ ಸಹೋದರ ಶಿವಕುಮಾರ್ ಎನ್ನುವವರು ಅಪಘಾತದಲ್ಲಿ ಗಾಯಗೊಂಡು ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದನ್ನು ಗಮನಿಸಿದ ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಶಿವಕುಮಾರ್ ಅವರ ಆರೋಗ್ಯ ವಿಚಾರಿಸಿ ಸಾಂತ್ವಾನ ಹೇಳಿದರು.
ನಂತರ ಸಂಬಂಧಿಸಿದ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರಲ್ಲದೆ ಅವರ ಮುಂದಿನ ಚಿಕಿತ್ಸಾ ವೆಚ್ಚವನ್ನು ಪೂರ್ತಿಯಾಗಿ ಭರಿಸುವ ಭರವಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















