ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೋವಿಡ್ 2ನೆಯ ಅಲೆ ಅತಿ ಹೆಚ್ಚಾಗಿ ಹರಡುತ್ತಿರುವುದು ಕಂಡು ಬಂದಿರುವುದರಿಂದ ರಾಜ್ಯ 10 ಜಿಲ್ಲೆಗಳಲ್ಲಿ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಹಳ್ಳಿಗಳಿಗೆ ಭೇಟಿ ಮತ್ತು ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಸಾರ್ವಜನಿಕರು ಒಂದೆಡೆ ಗುಂಪಾಗಿ ಸೇರುವುದನ್ನು ತಡೆಗಟ್ಟಲು ಹಾಗೂ ಸಾಂಕ್ರಾಮಿಕ ರೋಗ ಹರಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















