ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕೊರೋನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಮಸ್ಥ ಕ್ಷೇತ್ರದ ನಾಗರೀಕ ಬಂಧುಗಳು ಮುಂಜಾಗೃತವಾಗಿ ಕೋವಿಡ್ ವ್ಯಾಕ್ಸಿನ್ ಲಸಿಕೆಯನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಪಡೆದುಕೊಳ್ಳುವಂತೆ ಶಾಸಕ ಬಿ.ಕೆ.ಸಂಗಮೇಶ್ವರ್ ಮನವಿ ಮಾಡಿದ್ದಾರೆ.
ಕೊರೋನಾ ಲಸಿಕೆ ಪಡೆದು ಮಾತನಾಡಿದ ಅವರು, ಸ್ವಪ್ರೇರಿತರಾಗಿ ಬಂದು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೊರೋನ ವೈರಸ್ ಹತ್ತಿಕ್ಕಲು ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳುವ ಸಲುವಾಗಿ ಹಾಕಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ಸಾಮಾಜಿಕ ಅಂತರ, ಮಾಸ್ಕ್ ಬಳಸುವುದು, ಶುಚಿತ್ವದ ಕಡೆಗೆ ಹೆಚ್ಚಿನ ಗಮನಹರಿಸುವ ಮೂಲಕ ಆರೋಗ್ಯಯುತರಾಗಬೇಕು, ಇದಕ್ಕೆ ಸಮಸ್ಥ ಕ್ಷೇತ್ರದ ಜನತೆ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಮಲ್ಲಪ್ಪ ಸೇರಿದಂತೆ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post