ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ವಾಗ್ಮಿ, ಪ್ರೊ.ಎಂ.ಎ.ಹೆಗಡೆ (73)ಕೊರೋನಾ ಸೋಂಕಿನಿಂದಾಗಿ ಮೃತಪಟಿದ್ದಾರೆ.
ಹೆಗಡೆ ಅವರಿಗೆ ಏಪ್ರಿಲ್ 13ರಂದು ಕೊರೋನಾ ಸೋಂಕು ದೃಢಪಟ್ಟಿತ್ತು. ನಿನ್ನೆ ಬೆಳಿಗ್ಗೆಯಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಯಕ್ಷಗಾನದ ಅರ್ಥದಾರಿ, ಪ್ರಸಂಗಕರ್ತರಾಗಿದ್ದ ಅವರು ಎರಡನೇ ಅವಧಿಗೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಪ್ರಸುದ್ಧ ಯಕ್ಷಗಾನ ಕಲಾವಿದರ ಜೊತೆ ವರ್ಚುವಲ್ ರೂಪದಲ್ಲಿ ಮಾತಿನ ಮಂಟಪ ಮಾತುಕತೆ ಕಾರ್ಯಕ್ರಮ ಆಯೋಜಿಸಿದ್ದರು. ಅಕಾಡೆಮಿ ಅಧ್ಯಕ್ಷರಾಗಿ ಯಕ್ಷಗಾನ ಕಲೆ ಹಾಗೂ ಕಲಾವಿದರ ಬದುಕಿನ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















