ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಕೊರೊನಾ ಸೋಂಕು ಸಮುದಾಯಕ್ಕೆ ಹಬ್ಬಿದೆ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪ್ರತಿ ದಿನ ಶೇ.10ಕ್ಕೂ ಹೆಚ್ಚು ಪ್ರಕರಗಳು ವರದಿಯಾಗುತ್ತಿದ್ದು, ಸೋಂಕು ತಡೆಗೆ ಕಠಿಣ ಕ್ರಮ ಅನಿವಾರ್ಯ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಾಗುವುದು. ಹಾಗೂ ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅವರು ಸಹ ಕೆಲವು ಸಲಹೆಗಳನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ಧಾರೆ.
ನಾಳೆ ಬೆಂಗಳೂರಿನ ಎಲ್ಲಾ ಶಾಸಕರೊಂದಿಗೆ ಸಭೆ ನಡೆಸಲಾಗುವುದು, ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಸೂಚನೆ ಹಾಗೂ ತಾಂತ್ರಿಕ ಸಲಹಾ ಸಮಿತಿಯ ವರದಿಯಂತೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post