ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.
ಮುಖ್ಯಮಂತ್ರಿ ಅವರು ಪುಸ್ತಕ ಮತ್ತು ದಿನಪತ್ರಿಕೆ ಓದುವುದರಲ್ಲಿ ತಲ್ಲೀನರಾಗಿದ್ದು, ದೂರವಾಣಿ ಮೂಲಕವೇ ರಾಜ್ಯದ ಆಡಳಿತದ ಕುರಿತು ಗಮನಹರಿಸುತ್ತಿದ್ದಾರೆ. ಹಾಗೂ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಕಠಿಣ ಮಾರ್ಗಸೂಚಿಗಳ ಕುರಿತಾಗಿಯೂ ಸಚಿವರೊಂದಿಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post