ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ಸಾಲುಗಟ್ಟಿ ನಿಂತ ವೃದ್ದರು, ಮಾಸ್ಕ್ ಹಾಕಿಕೊಳ್ಳಿ ಅಂತರದಿಂದ ನಿಲ್ಲಿ ಎಂದು ಹೇಳುತ್ತಿರುವ ಆಸ್ಪತ್ರೆಯ ಸಿಬ್ಬಂದಿಗಳು, ಇಷ್ಟೊಂದು ಜನ ಕೊರೋನಾದಲ್ಲೂ ಸಾಲುಗಟ್ಡಿ ನಿಂತಿದ್ದಾರೆ ಎಂದು ಕೊಂಡು ಅಲ್ಲಿಗೆ ಹೊಗಿ ವಿಚಾರಿಸಿದಾಗ ತಿಳಿದುಬಂದಿದ್ದು, ಶಿವಮೊಗ್ಗ ಕಣ್ಣಿನ ಆಸ್ಪತ್ರೆ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ ಇದೆ ಎನ್ನುವುದು.
ಹೌದು ಇಂದು ಕಂಡು ಬಂದಿದ್ದು ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ. ಕೊರೋನಾ ಹಿನ್ನೆಲೆಯಲ್ಲಿ ಒಂದು ವರ್ಷದಿಂದ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ವತಿಯಿಂದ ಉಚಿತ ನೇತ್ರ ತಪಾಸಣೆ ಹಾಗೂ ನೇತ್ರ ಶಸ್ತ್ರಚಿಕಿತ್ಸೆ ಮಾಡುವುದಕ್ಕೆ ಸಾಧ್ಯವಾಗಿರಲಿಲ್ಲ. ಆದರೆ, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಅರೋಗ್ಯ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶಂಕರ್ ಕಣ್ಣಿನ ಆಸ್ಪತ್ರೆ ಇವರ ಸಹಯೋಗದಲ್ಲಿ ನಿನ್ನೆ ನೇತ್ರ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಒಂದು ವರ್ಷದಿಂದ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆಗೆ ಕಾತುರರಾಗಿ ಕಾಯುತ್ತಿದ್ದ ಸುಮಾರು 300ಕ್ಕೂ ಹೆಚ್ಚು ಜನರು ಕಣ್ಣಿನ ತಪಾಸಣೆ ಮಾಡಿಸಿಕೊಂಡರು. ಕೋರೋನಾ ಆರಂಭವಾಗುವ ಮೊದಲು ಪ್ರತಿ ತಿಂಗಳ ಭಾನುವಾರ ತಾಲೂಕು ಆಸ್ಪತ್ರೆಯಲ್ಲಿ ನೇತ್ರ ತಪಾಸಣೆ ಮಾಡಿ ಅವಶ್ಯಕತೆ ಇದ್ದರೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿತ್ತು.
ಶಂಕರ ಆಸ್ಪತ್ರೆಯ ಸಹಕಾರದಿಂದ ರೋಗಿಗಳನ್ನು ಬಸ್ಸಿನಲ್ಲಿ ಕರೆದುಕೊಂಡು ಹೋಗಿ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿ, ಮತ್ತೆ ವಾಪಾಸ್ ಕರೆ ತಂದು ಊರಿಗೆ ಬಿಡಲಾಗುತ್ತಿತ್ತು. ಕೋರೊನಾದಿಂದಾಗಿ ಇದು ಸಾಧ್ಯವಾಗಿರಲಿಲ್ಲ. ಹಾಗೂ ಮತ್ತೆ ಇದೇ ಕೊನೆಯ ಶಿಬಿರವಾಗಬಹುದು ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.
ಕೊರೋನಾ ಕಡಿಮೆ ಆದರೆ ಮತ್ತೆ ತಪಾಸಣೆ ಶಿಬಿರ ಮುಂದುವರೆಯುವುದು ಎಂದು ಶಂಕರ ಕಣ್ಣಿನ ಆಸ್ಪತ್ರೆ ಅಧಿಕಾರಿ ಆಶ್ವಾಸನೆ ನೀಡಿದ್ದಾರೆ.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post